ಉಡುಪಿ : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ತೀರ್ಪನ್ನು ಜಿಲ್ಲಾ ಸತ್ರ ನ್ಯಾಯಾಲಯ ಜೂನ್ 8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ತೀರ್ಪು ಮುಂದೂಡಿರುವ ನ್ಯಾಯಾಲಯ, ಜೂನ್ 8ರಂದು ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಹಾಗೂ ಸಾಕ್ಷ್ಯ ನಾಶ ಆರೋಪಿ ರಾಘವೇಂದ್ರ ಹಾಜರಾಗಲು ಆದೇಶ ನೀಡಿದೆ.
ಜೊತೆಗೆ ಜೈಲಿನಲ್ಲಿರುವ ಆರೋಪಿಗಳಾದ ನವನೀತ್ ಶೆಟ್ಟಿ ಮತ್ತು ನಿರಂಜನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ಸೂಚಿಸಿದೆ.
ಓದಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಕೇಸ್: ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್
2016ರ ಜುಲೈ ತಿಂಗಳಲ್ಲಿ ರಾಜೇಶ್ವರಿ ಶೆಟ್ಟಿ ಗಂಡನನ್ನು ಕೊಂದು, ಹೋಮಕುಂಡದಲ್ಲಿ ಸುಟ್ಟು ಹಾಕಿದ್ದ ಪ್ರಕರಣ ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿತ್ತು.
ಬಳಿಕ ಈ ಕೊಲೆಗೆ ಸಾಥ್ ಕೊಟ್ಟ ರಾಜೇಶ್ವರಿ ಪ್ರಿಯಕರ ನಿರಂಜನ್ ಭಟ್, ಪುತ್ರ ನವನೀತ್ ಶೆಟ್ಟಿ ಸೇರಿ ಅನೇಕ ಆರೋಪಿಗಳ ಮೇಲೆ ಚಾರ್ಜ್ಶೀಟ್ ಸಲ್ಲಿಸಲಾಗಿತ್ತು.
ಇದನ್ನೂ ಓದಿ: ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗೆ ಷರತ್ತುಬದ್ಧ ಜಾಮೀನು