ಉಡುಪಿ: ಉಡುಪಿಯಲ್ಲಿ ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಶುಕ್ರವಾರ ರಥಬೀದಿಯಲ್ಲಿ ವಿಟ್ಲಪಿಂಡಿ ಮಹೋತ್ಸವ ನಡೆಯಲಿದ್ದು, ಸೆಪ್ಟಂಬರ್ 21ರವರೆಗೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ. ಕೋವಿಡ್19 ಹಿಂದಿನ ಸೂಚನೆಯನ್ನೇ ಮಠ ಪಾಲಿಸಬೇಕಾಗುತ್ತ.ದೆ ವಿಟ್ಲಪಿಂಡಿ ಆಚರಣೆಗೆ ನೂರು ಜನ ಸೇರುವ ಅವಕಾಶವೂ ಇಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.
ಕೃಷ್ಣ ಮಠದ ಪರ್ಯಾಯ ಸ್ವಾಮೀಜಿ ಜೊತೆ ಮಾತನಾಡಿದ್ದೇನೆ .ಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಆಚರಣೆಯಲ್ಲಿ ಸಾರ್ವಜನಿಕರಿಗೆ ಭಾಗಿಯಾಗುವ ಅವಕಾಶ ಇಲ್ಲ ಈ ಹಿನ್ನೆಲೆ ಸರ್ಕಾರದ ನಿಯಮವನ್ನು ಪಾಲಿಸುವುದಾಗಿ ಸ್ವಾಮೀಜಿ ಒಪ್ಪಿಕೊಂಡಿದ್ದಾರೆ. ಸಾಂಪ್ರದಾಯಿಕ ರೀತಿಯಲ್ಲಿ ಅಷ್ಟಮಿ ಮತ್ತು ವಿಟ್ಲಪಿಂಡಿ ಆಚರಣೆ ನಡೆಯುತ್ತದೆ ಎಂದರು.
ಅಷ್ಟಮಿ ಮತ್ತು ವಿಟ್ಲಪಿಂಡಿಯಂದು ಯಾವುದೇ ವೇಷಗಳಿಗೆ ಅವಕಾಶ ಇಲ್ಲ. ಮಠದ ಸಿಬ್ಬಂದಿ ಮೊಸರು ಕುಡಿಕೆಯನ್ನು ಸಾಂಪ್ರದಾಯಕವಾಗಿ ನಡೆಸುತ್ತಾರೆ. ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಇಲ್ಲ ಎಂದು ಹೇಳಿದರು.