ಉಡುಪಿ: ಕಾಪು ಮಲ್ಲಾರು ಪಕೀರನಕಟ್ಟೆ ಮಸೀದಿ ಬಳಿ ಇರುವ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಸಜೀವ ದಹನವಾಗಿದ್ದು, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.
ರಜಾಕ್ ಮತ್ತು ರಜಬ್ ಅಂಗಡಿಯಲ್ಲಿ ಸಜೀವವಾಗಿ ದಹನವಾದ್ರೆ, ಆಸ್ಪತ್ರೆಯಲ್ಲಿ ನಿಯಾಜ್ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಫ್ರಿಡ್ಜ್ ಸಹಿತ ಗುಜರಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಬಿಬಿಎಂಪಿ ಕಸದ ಲಾರಿ ಹರಿದು ಬಾಲಕಿ ಸಾವು.. 6ಕ್ಕೂ ಅಧಿಕ ಮಂದಿಗೆ ಗಾಯ
ಉಡುಪಿ ಅಗ್ನಿಶಾಮಕ ದಳ ತಂಡದ ಎರಡು ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಯಿತು. ಅಗ್ನಿಶಾಮಕದಳದ ಸತತ ಕಾರ್ಯಾಚರಣೆಯಿಂದಾಗಿ ಬೆಂಕಿ ನಿಯಂತ್ರಣಕ್ಕೆ ಬಂದಿದೆ.