ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಸಿ.ಪಿ.ಯೋಗೀಶ್ವರ್ ಬಹಳಷ್ಟು ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬುದು ನಮ್ಮ ಅಭಿಪ್ರಾಯವೂ ಆಗಿದೆ ಎಂದು ಆಗಿದೆ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಪಕ್ಷ ಸಂಘಟನೆಗಾಗಿ ಶುಕ್ರವಾರ ಉಡುಪಿಗೆ ಆಗಮಿಸಿದ ಸಚಿವರು ಸುದ್ದಿಗಾರರೊಂದಿಗೆ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದರು. ಯೋಗೀಶ್ವರ್ ಅವರಿಗೆ ಸಚಿವ ಸ್ಥಾನ ಕೊಡಬೇಕು ಎನ್ನುವ ಒತ್ತಾಯವಿದ್ದು, ಅವರಿಗೂ ಸಚಿವ ಸ್ಥಾನದ ಅಪೇಕ್ಷೆ ಇದೆ. ಅಲ್ಲದೇ ನಮ್ಮ ಅಭಿಪ್ರಾಯವೂ ಅದೇ ಆಗಿದೆ. ಈ ಬಗ್ಗೆ ಕೇಂದ್ರದ ವರಿಷ್ಠರು ಮತ್ತು ಮುಖ್ಯಮಂತ್ರಿ ಅವರು ಸಮಾಲೋಚನೆ ಮಾಡುತ್ತಾರೆ ಎಂದರು.
ರಾಜ್ಯದಲ್ಲಿ ಸಂಪುಟ ವಿಸ್ತರಣೆ ಸಾಕಷ್ಟು ಹಮಗಮನಸೆ ಳೆದಿದ್ದು, ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಒಂದು ಜಟಿಲ ವಿಚಾರವಾಗಿದೆ. ಅಲ್ಪಾವಧಿಯಲ್ಲಿ ಎಲ್ಲವೂ ಗೊತ್ತಾಗಲಿದೆ. ಬೇರೆ ಪಕ್ಷದಿಂದ ಬಿಜೆಪಿಗೆ ಬಂದವರಿಗೆ ಸ್ಥಾನ ನೀಡುವುದು ಮೂಲ ಬಿಜೆಪಿಗರಿಗೆ ಬೇಸರದ ವಿಚಾರವಾದರೂ, ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗಬೇಕಾಗುತ್ತದೆ. ವಲಸೆ ಬಂದವರೂ ಸರ್ಕಾರ ರಚನೆಗೆ ಕಾರಣೀಕರ್ತರಾಗಿದ್ದಾರೆ.,. ಬಿಜೆಪಿಯಲ್ಲಿದ್ದಾಗ ಎಲ್ಲರೂ ಒಂದೇ, ಒಳಗೆ ಹೊರಗೆ ಅನ್ನೋ ಭಾವನೆ ಸರಿಯಲ್ಲ. ತಾರತಮ್ಯಕ್ಕೆ ಅವಕಾಶ ಇಲ್ಲ. ಎಲ್ಲರನ್ನೂ ಕುಟುಂಬದ ರೀತಿ ಜೋಡಿಸಿಕೊಂಡು ಹೋಗಬೇಕಾಗುತ್ತದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಇಂದು ಸಚಿವ ಸಂಪುಟ ಸಭೆ ತ್ವರಿತವಾಗಿ ನಿಶ್ಚಯವಾಗಿದ್ದರಿಂದ ಯಾರಿಗೂ ಗೊತ್ತಿರಲಿಲ್ಲ. ಇನ್ನುವರು ಪೂರ್ವ ನಿಗದಿಯಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದ ಸಂಪುಟ ಸಭೆಯಲ್ಲಿ ಭಾಗವಹಿಸಲಾಗಲಿಲ್ಲ ಎಂದರು. ದಿಲ್ಲಿಯಲ್ಲಿ ಸಿ.ಟಿ.ರವಿ ಅವರ ಕಚೇರಿ ಉದ್ಘಾಟನೆಗಾಗಿ ಅನೇಕ ಸಚಿವರು ತೆರಳಿದ್ದಾರೆ. ನಾನು ಗ್ರಾಮ ಸ್ವರಾಜ್ ಸಮಾವೇಶದ ಪ್ರವಾಸದಲ್ಲಿದ್ದೇನೆ ಎಂದು ಅಶ್ವತ್ಥ ನಾರಾಯಣ ಅವರು ಉಡುಪಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಇದನ್ನೂ ಓದಿ: ಗೋವಾದಲ್ಲಿ ಶಾಸಕಿ ಹೆಬ್ಬಾಳ್ಕರ್ ಪುತ್ರನ ಅದ್ದೂರಿ ವಿವಾಹ.. ಸಿದ್ದು, ಡಿಕೆಶಿ ಸೇರಿ ಗಣ್ಯರು ಭಾಗಿ