ಉಡುಪಿ: ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ ಮಾಡಿ ಎರಡು ವಾಹನಗಳನ್ನು ನಜ್ಜುಗುಜ್ಜು ಮಾಡಿದ ಕಾರು ಚಾಲಕನಿಗೆ ಸಾರ್ವಜನಿಕರು ಗೂಸಾ ನೀಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ನಗರದ ಕೃಷ್ಣ ಮಠದ ಸಮೀಪ ಬೆಂಗಳೂರು ಮೂಲದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾವಣೆ ಮಾಡಿದ್ದಾನೆ. ಇದರಿಂದಾಗಿ ಆಕ್ರೋಶಗೊಂಡ ಸಾರ್ವಜನಿಕರು ವಾಹನ ಸವಾರನಿಗೆ ಧರ್ಮದೇಟು ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ, ಕಾರಿನಲ್ಲಿದ್ದ ತಾಯಿ - ಮಗು ಸ್ಪಲ್ಪದರಲ್ಲೇ ಅಪಘಾತದಿಂದ ಪಾರಾಗಿದ್ದಾರೆ.
ಈ ಸಂಬಂಧ ಸ್ಥಳಕ್ಕೆ ಉಡುಪಿ ನಗರ ಠಾಣಾ ಹೊಯ್ಸಳ ಪೊಲೀಸರು ಭೇಟಿ ನೀಡಿ ಯುವಕರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಓದಿ: ಅಮಲು ಪದಾರ್ಥ ಸೇವಿಸಿ ರಸ್ತೆ ಮಧ್ಯೆ ರಂಪಾಟ: ಪೊಲೀಸರಿಗೆ ಆವಾಜ್ ಹಾಕಿದ ಕಾಲೇಜು ವಿದ್ಯಾರ್ಥಿಗಳು