ಉಡುಪಿ: ಉಡುಪಿಯ ಸಂತೆಕಟ್ಟೆಯಲ್ಲಿ ಅಪಘಾತ ಸಂಭವಿಸಿದ್ದು, ತಂದೆ- ಮಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಉಡುಪಿ ಜಿಲ್ಲೆಯ ಪೊಲೀಸ್ ಕಾನ್ಸ್ಟೇಬಲ್ ಗಣೆಶ್ ಪೈ (48) ಮತ್ತು ಮಗಳು ಗಾಯತ್ರಿ ಪೈ ಮೃತಪಟ್ಟವರು. ಹುಬ್ಬಳ್ಳಿಯಿಂದ ಆಗಮಿಸಿದ್ದ ಮಗಳನ್ನು ಕರೆದುಕೊಂಡು ತನ್ನ ಸ್ಕೂಟರ್ನಲ್ಲಿ ಹೋಗುತ್ತಿದ್ದ ಇವರಿಗೆ ಬಸ್ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಉಕ್ರೇನ್ನಿಂದ ತಾಯ್ನಾಡಿಗೆ ಸುರಕ್ಷಿತವಾಗಿ ಬಂದ ಮಗಳು: ಪಿಎಂ, ಸಿಎಂ ನಿಧಿಗೆ ಹಣ ನೀಡಿದ ಕುಟುಂಬ
ಕೇರಳ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಎಸಿ ಬಸ್ ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಈ ಘಟನೆ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.