ಉಡುಪಿ: ಮುಂಬೈನಿಂದ ಉಡುಪಿಗೆ ಆಗಮಿಸುತ್ತಿದ್ದ ಟಿಟಿ ವಾಹನಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಲೋನವಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಾಂತ್ರಿಕ ದೋಷದಿಂದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಉಡುಪಿಯ ಕುಂದಾಪುರಕ್ಕೆ ಆಗಮಿಸುತ್ತಿದ್ದ 11 ಮಂದಿ ಪ್ರಯಾಣಿಕರು ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಾಕ್ಡೌನ್ ಸಡಿಲಿಕೆಯಾದ ಮೇಲೆ ಮುಂಬೈನ ಭಾಂಡುಪ್ನಿಂದ ಕೇಶವ ಪೂಜಾರಿ ಎಂಬುವರ ಕುಟುಂಬ ಉಡುಪಿಯ ಊರಿಗೆ ಹೊರಟಿತ್ತು. ಊರಿಗೆ ಆಗಮಿಸಲು ಮುಂಬೈನ ವಾಹನವೊಂದನ್ನು ಬುಕ್ ಮಾಡಿದ್ದ ಕೇಶವ ಪೂಜಾರಿ, ಟಿಟಿ ವಾಹನದಲ್ಲಿ ಕುಂದಾಪುರಕ್ಕೆ ಆಗಮಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಚಾಲಕ ವಾಹನವನ್ನು ನಿಲ್ಲಿಸಿ ಸಮಯ ಪ್ರಜ್ಞೆ ಮೆರೆದಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.