ETV Bharat / state

ಉಚ್ಚಿಲದಲ್ಲಿ ದೋಣಿ ಮುಳುಗಡೆ: ಮೀನುಗಾರರ ರಕ್ಷಣೆ - ಈಟಿವಿ ಭಾರತ ಕನ್ನಡ

ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಉಚ್ಚಿಲದಲ್ಲಿ ನಡೆದಿದೆ.

fishing-boat-drowned-in-uchila
ಉಚ್ಚಿಲದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ : ಮೀನುಗಾರರ ರಕ್ಷಣೆ
author img

By

Published : Dec 12, 2022, 9:54 PM IST

ಉಚ್ಚಿಲದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ : ಮೀನುಗಾರರ ರಕ್ಷಣೆ

ಉಡುಪಿ: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿರುವ ಘಟನೆ ಜಿಲ್ಲೆಯ ಉಚ್ಚಿಲ ಎಂಬಲ್ಲಿ ನಡೆದಿದೆ. ಏಳು ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ವಿಮಲಾ ಸಿ ಪುತ್ರನ್ ಎಂಬವರಿಗೆ ಸೇರಿದ ದೋಣಿ ಮುಳುಗಿದೆ.

ಸೋಮವಾರ ಬೆಳಿಗ್ಗೆ ಐದು ಗಂಟೆ ಸುಮಾರಿಗೆ ದೋಣಿಯಲ್ಲಿ ಸುಮಾರು 7 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಮುಳುಗಡೆಯಾಗಿದ್ದು, ದೋಣಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಲೆ ಹಾಗೂ ಹೈ ಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದ್ದು, ಸುಮಾರು 6 ಲಕ್ಷ ರೂ ನಷ್ಟ ಸಂಭವಿಸಿರುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಘಟನಾ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್ ಭೇಟಿ ನೀಡಿ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಮ್ಯಾಂಡೌಸ್​​ ಸೈಕ್ಲೋನ್: ತಮಿಳುನಾಡು, ಪುದುಚೇರಿ ಮತ್ತು ಆಂಧ್ರದ ಕರಾವಳಿಯಲ್ಲಿ ಕಟ್ಟೆಚ್ಚರ.. ಕೆಲವೆಡೆ ರಜೆ ಘೋಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.