ಉಡುಪಿ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ನಿಂದ ಮೈತ್ರಿ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಜೆಡಿಎಸ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣಾ ಸಂದರ್ಭ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ನಾನು ಕಾಂಗ್ರೆಸ್ನಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲೂ ಚರ್ಚಿಸಿದ್ದೆ. ನಂತರ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಂಡ ಕಾರಣ ನಾನು ಮೈತ್ರಿ ಅಭ್ಯರ್ಥಿಯಾಗಿದ್ದೆ. ಹಾಗಾಗಿ ಜೆಡಿಎಸ್ನಿಂದ ಸ್ಪರ್ಧಿಸಬೇಕಾಗಿ ಬಂತು. ಬಿ- ಫಾರಂನಲ್ಲಿ ಜೆಡಿಎಸ್ ಸದಸ್ಯನೆಂದು ನಮೂದಿಸಲಾಗಿತ್ತು.
ಈಗ ಮೈತ್ರಿ ಸರ್ಕಾರ ಇಲ್ಲ. ತಾಂತ್ರಿಕ ಕಾರಣಕ್ಕೆ ಹೊಂದಿದ್ದ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರಮೋದ್ ಮಧ್ವರಾಜ್ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಸ್ಪಷ್ಟನೆ ನೀಡಿದ್ದಾರೆ.