ETV Bharat / state

ಉಡುಪಿ: ತಾಯಿ, ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ - Four members of the same family were killed

ತಾಯಿ, ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

four-members-of-the-same-family-were-killed-in-udupi
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ : ಬೆಚ್ಚಿಬಿದ್ದ ಗ್ರಾಮಸ್ಥರು
author img

By ETV Bharat Karnataka Team

Published : Nov 12, 2023, 1:57 PM IST

Updated : Nov 12, 2023, 2:15 PM IST

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಪ್ರತಿಕ್ರಿಯೆ

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ನೇಜಾರುವಿನ ತೃಪ್ತಿನಗರ ಎಂಬಲ್ಲಿ ನಡೆದಿದೆ. ಮನೆಗೆ ನುಗ್ಗಿ ತಾಯಿ ಮತ್ತು ಮೂವರು ಮಕ್ಕಳನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆಗೈದಿದ್ದಾರೆ. ಈ ವೇಳೆ ವೃದ್ಧೆಯೊಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಯಾದವರನ್ನು ಹಸೀನಾ (46), ಅಫ್ನಾನ್ (23), ಅಯ್ನಾಝ್ (21), ಆಸಿಂ (12) ಎಂದು ಗುರುತಿಸಲಾಗಿದೆ. ದೀಪಾವಳಿ ಹಬ್ಬದ ದಿನ ಹತ್ಯೆ ನಡೆದಿರುವುದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಒಂದೇ ಕುಟುಂಬದ ನಾಲ್ವರ ಹತ್ಯೆ ಹಿಂದೆ ದರೋಡೆ ಕೃತ್ಯದ ಶಂಕೆ ವ್ಯಕ್ತವಾಗಿದೆ. ಈ ಮನೆಯ ಯಜಮಾನ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಮನೆಯಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ಮತ್ತು ವೃದ್ಧೆಯೊಬ್ಬರು ವಾಸವಿದ್ದರು. ಈ ವೇಳೆ ಮನೆಗೆ ನುಗ್ಗಿ ಕೃತ್ಯ ಎಸಗಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್​, ಉಡುಪಿಯ ನೇಜಾರುವಿನ ತೃಪ್ತಿನಗರದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆಗೈಯಲಾಗಿದೆ. ಈ ಸಂಬಂಧ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತದೆ. ನಾಲ್ವರನ್ನು ಕೊಲೆಗೈದು, ಮನೆಯ ಯಜಮಾನಿಯ ಅತ್ತೆಗೂ ಗಾಯಗೊಳಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯ ಯಜಮಾನ ವಿದೇಶದಲ್ಲಿದ್ದು ಅವರನ್ನು‌ ಸಂಪರ್ಕಿಸುತ್ತೇವೆ. ಮನೆಯಲ್ಲಿ ಯಾವುದೇ ವಸ್ತು ಕಳವಾದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ. ಕೊಲೆಯ ಹಿಂದಿನ‌ ಕಾರಣ ತನಿಖೆಯ ಬಳಿಕ ತಿಳಿದುಬರಲಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಯುವತಿಯರ ಡೀಪ್​ ಫೇಕ್ ಫೋಟೋ ಪ್ರಕರಣ: ಆರೋಪಿ ಬಂಧನ, ಬೆಳಗಾವಿ ಎಸ್ಪಿ ಹೇಳಿದ್ದೇನು..?

Last Updated : Nov 12, 2023, 2:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.