ಉಡುಪಿ: ದ್ವಿಚಕ್ರ ವಾಹನಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಯುವತಿವೋರ್ವಳು ಸಾವನ್ನಪ್ಪಿ, ಆಕೆಯ ಸ್ನೇಹಿತೆ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (24) ಮೃತಪಟ್ಟಿದ್ದು, ಉಜಿರೆ ಮೂಲದ ಪ್ರಜ್ಞಾ (25) ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಂದಾಪುರದಿಂದ ಬ್ರಹ್ಮಾವರ ಕಡೆ ಸ್ಕೂಟಿಯಲ್ಲಿ ಯುವತಿಯರು ತೆರಳುತ್ತಿದ್ದಾಗ, ಕಾರು ವೇಗವಾಗಿ ಬಂದು ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರೂ ರಸ್ತೆಗೆ ಬಿದ್ದ ಪರಿಣಾಮ ಗಂಭೀರ ಸ್ವರೂಪದ ಗಾಯಗಳಾಗಿತ್ತು. ನಂತರ ಆಸ್ಪತ್ರೆಗೆ ದಾಖಲಿಸಿದಾಗ ಶ್ರೇಯಾ ಶಾನುಭಾಗ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಪ್ರಜ್ಞಾ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದಾಗ ಸ್ಥಳೀಯರು, ಸಾಸ್ತಾನ ಟೋಲ್ ಬಳಿ ವಾಹನ ತಡೆದು ಕೋಟ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.