ETV Bharat / state

ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ ನೇಮಕ ಪ್ರಕರಣ : ಸರ್ಕಾರ ಮೂಕ ಪ್ರೇಕ್ಷಕನಾಗಬಾರದೆಂದ ಹೈಕೋರ್ಟ್ - ಶಿರೂರು ಮಠಕ್ಕೆ ಅಪ್ರಾಪ್ತನನ್ನು ಪೀಠಾಧಿಪತಿ

ಶಿರೂರು ಮಠದ ಆಡಳಿತಾತ್ಮಕ, ಆರ್ಥಿಕ, ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ಸೋದೆ ಮಠಕ್ಕೆ ಯಾವುದೇ ಅಧಿಕಾರವಿಲ್ಲ. ಹೀಗಿದ್ದೂ, ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಪೀಠಾಧಿಪತಿ ನೇಮಕ ಮಾಡಿರುವುದು ಕಾನೂನು ಬಾಹಿರ ಕ್ರಮ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು..

ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ ನೇಮಕ ಪ್ರಕರಣ
ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ ನೇಮಕ ಪ್ರಕರಣ
author img

By

Published : May 25, 2021, 6:41 PM IST

ಬೆಂಗಳೂರು : ಉಡುಪಿಯ ಶಿರೂರು ಮಠಕ್ಕೆ 16 ವರ್ಷದ ಬಾಲಕನನ್ನು ಪೀಠಾಧಿಪತಿಯಾಗಿ ನೇಮಕ ಮಾಡಿರುವ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಹೈಕೋರ್ಟ್, ಇಂತಹ ವಿಷಯಗಳಲ್ಲಿ ಸರ್ಕಾರ ಮೂಕ ಪ್ರೇಕ್ಷಕನಂತೆ ವರ್ತಿಸಬಾರದು ಎಂದು ಅಭಿಪ್ರಾಯಪಟ್ಟಿದೆ.

ಶಿರೂರು ಮಠಕ್ಕೆ ಅಪ್ರಾಪ್ತನನ್ನು ಪೀಠಾಧಿಪತಿಯಾಗಿ ನೇಮಿಸಿರುವ ಕ್ರಮ ಪ್ರಶ್ನಿಸಿ ಮಠದ ಭಕ್ತ ಸಮಿತಿಯ ಕಾರ್ಯದರ್ಶಿ ಪಿ. ಲತವ್ಯ ಆಚಾರ್ಯ ಹಾಗೂ ಇತರೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲ ಡಿ.ಆರ್. ರವಿಶಂಕರ್ ವಾದಿಸಿ, 16 ವರ್ಷದ ಬಾಲಕನನ್ನು ಪೀಠಾಧಿಪತಿಯಾಗಿ ನೇಮಕ ಮಾಡಲಾಗಿದೆ. ಬಲವಂತವಾಗಿ ಸನ್ಯಾಸ ದೀಕ್ಷೆ ನೀಡಲಾಗಿದೆ. 18 ವರ್ಷ ತುಂಬದವರು ನೀಡುವ ಸಮ್ಮತಿಗೂ ಕಾನೂನು ಮಾನ್ಯತೆ ಇಲ್ಲ. ಪ್ರಕರಣದಲ್ಲಿ ಅಪ್ರಾಪ್ತರ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿಯಲ್ಲಿ ಅಪ್ರಾಪ್ತರ ಹಕ್ಕುಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಸರ್ಕಾರ ಈ ವಿಚಾರದಲ್ಲಿ ಮೂಕಪ್ರೇಕ್ಷಕನಂತೆ ವತಿರ್ಸಬಾರದು ಎಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು.

ಇನ್ನು, ಅರ್ಜಿದಾರರು ಖಾಸಗಿ ಮಠ ಹಾಗೂ ವ್ಯಕ್ತಿಗಳಿಗೆ ನಿರ್ದೇಶನ ನೀಡುವಂತೆ ಪಿಐಎಲ್ ಮೂಲಕ ಕೋರಿದ್ದಾರೆ. ಆದರೆ, ಪ್ರಕರಣ ಸಂಪೂರ್ಣವಾಗಿ ಖಾಸಗಿ ವ್ಯಾಜ್ಯವಾಗಿದ್ದು, ಪಿಐಎಲ್ ವ್ಯಾಪ್ತಿಯಲ್ಲಿ ವಿಚಾರಣೆ ನಡೆಸಲಾಗದು ಎಂದಿತು.

ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಪರಿಷ್ಕರಿಸಿ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ತಿದ್ದುಪಡಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ನೀಡಿದ ಪೀಠ, ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿತು.

ಅರ್ಜಿದಾರರ ಮನವಿ

ಶಿರೂರು ಮಠದ ಆಡಳಿತಾತ್ಮಕ, ಆರ್ಥಿಕ, ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ಸೋದೆ ಮಠಕ್ಕೆ ಯಾವುದೇ ಅಧಿಕಾರವಿಲ್ಲ. ಹೀಗಿದ್ದೂ, ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಪೀಠಾಧಿಪತಿ ನೇಮಕ ಮಾಡಿರುವುದು ಕಾನೂನು ಬಾಹಿರ ಕ್ರಮ.

ಹೀಗಾಗಿ, ಶಿರೂರು ಮಠದ ಪೀಠಾಧಿಪತಿ ಸ್ಥಾನಕ್ಕೆ ಯಾವುದೇ ವ್ಯಕ್ತಿಯನ್ನು ನೇಮಕ ಮಾಡಲು ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅವರಿಗೆ ಅಧಿಕಾರವಿಲ್ಲ ಎಂದು ಘೋಷಿಸಬೇಕು.

ಜತೆಗೆ ಅಪ್ರಾಪ್ತರನ್ನು ಶಿರೂರು ಮಠದ ಪೀಠಾಧಿಪತಿಯಾಗಿ ನೇಮಕ ಮಾಡಿರುವುದು ಕಾನೂನುಬಾಹಿರ ಕ್ರಮವೆಂದು ಘೋಷಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಓದಿ: ಶಿರೂರು ಮಠದ 32ನೇ ಪೀಠಾಧಿಪತಿಯಾಗಿ ಶ್ರೀ ವೇದವರ್ಧನ ತೀರ್ಥರಿಗೆ ಪಟ್ಟಾಭಿಷೇಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.