ETV Bharat / state

ಉಡುಪಿ: ಮೀನುಗಾರಿಕೆಗೆ ತೆರಳಿದ ಏಳು ಮಂದಿ ಮೀನುಗಾರರಿದ್ದ ದೋಣಿ ಮುಳುಗಡೆ! - ಗೋವಾ-ಮಹಾರಾಷ್ಟ್ರ ಗಡಿ ಭಾಗದ ಸಮುದ್ರದಲ್ಲಿ ಏಳು ಮಂದಿ ಮೀನುಗಾರರಿದ್ದ ದೋಣಿ ಮುಳುಗಡೆ

ನ. 17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು, ಗೋವಾ-ಮಹಾರಾಷ್ಟ್ರ ಗಡಿ ಭಾಗದ ಸಮುದ್ರದಲ್ಲಿ ಮುಳುಗಡೆಯಾಗಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.

Had gone fishing Boat sinks in udapi
ಮೀನುಗಾರಿಕೆಗೆ ತೆರಳಿದ್ದ ಏಳು ಮಂದಿ ಮೀನುಗಾರರಿದ್ದ ದೋಣಿ ಮುಳುಗಡೆ
author img

By

Published : Nov 29, 2020, 8:04 AM IST

ಉಡುಪಿ: ಗೋವಾ-ಮಹಾರಾಷ್ಟ್ರ ಗಡಿ ಭಾಗದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಏಳು ಮಂದಿ ಮೀನುಗಾರರಿದ್ದ ದೋಣಿಯೊಂದು ಮುಳುಗಿದೆ. ಅದೃಷ್ಟವಶಾತ್ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಮುದ್ರದಲ್ಲಿ ಮುಳುಗಿದ ದೋಣಿಯು ಮಲ್ಪೆಯದ್ದಾಗಿದ್ದು, ಮಥುರಾ ಹೆಸರಿನ ಈ ಆಳಸಮುದ್ರ ಮೀನುಗಾರಿಕಾ ದೋಣಿಯು ನ. 17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ದೋಣಿಯಲ್ಲಿ ಏಳು ಮಂದಿ ಮೀನುಗಾರರಿದ್ದರು. ಸಮುದ್ರದಲ್ಲಿ ಮುಳುಗಿದ ದೋಣಿಯಲ್ಲಿ ಬಲೆ, ಡೀಸೆಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಗೋವಾ-ಮಹಾರಾಷ್ಟ್ರ ರಾಜ್ಯ ಗಡಿಯಲ್ಲಿ ಸುಮಾರು 22 ಮಾರು ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ದೋಣಿಯ ತಳಭಾಗಕ್ಕೆ ವಸ್ತುವೊಂದು ಡಿಕ್ಕಿ ಹೊಡೆದಿದೆ. ಇದರಿಂದ ದೋಣಿಯ ’ಹಲ್’ ಒಡೆದು ಸ್ಟೋರೇಜ್ ಮೂಲಕ ಸಮುದ್ರ ನೀರು ದೋಣಿಯೊಳಗೆ ನುಗ್ಗಿ ಬಂದಿದೆ. ಅದರಲ್ಲಿದ್ದ ಏಳು ಮಂದಿ ಮೀನುಗಾರರನ್ನು ಪಕ್ಕದಲ್ಲೇ ಹೋಗುತ್ತಿದ್ದ ಮಾಹೂರ್ ದೋಣಿಯವರು ರಕ್ಷಿಸಿದ್ದಾರೆ. ಎಲ್ಲ ಮೀನುಗಾರರನ್ನು ಮಲ್ಪೆ ಬಂದರಿಗೆ ಸುರಕ್ಷಿತವಾಗಿ ಕರೆತರಲಾಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.