ETV Bharat / state

ಹೆಚ್​​ಡಿಕೆ ಟ್ವೀಟ್​​​ಗೆ, ಪೇಜಾವರ ಶ್ರೀ ತೀಕ್ಷ್ಣ ಪ್ರತಿಕ್ರಿಯೆ.. - ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್​​​

ಇಂತಹ ಮಹತ್ಕಾರ್ಯದ ಬಗ್ಗೆ ಪ್ರತಿಕ್ರಿಯೆ ನೀಡುವಾಗ ಜವಾಬ್ದಾರಿಯುತವಾಗಿ ಇರಬೇಕು ಎಂದರು. ಮಾಜಿ ಸಿಎಂ ಸಿದ್ದರಾಮಯ್ಯ ದೇಣಿಗೆ ನೀಡಲು ನಿರಾಕರಿಸಿದ ವಿಚಾರವಾಗಿ ಮಾತನಾಡಿದ ಶ್ರೀಗಳು, ಯಾರಿಗೂ ನಿಧಿ ಸಮರ್ಪಣೆ ಮಾಡುವಂತೆ ನಾವು ಒತ್ತಾಯಿಸುವುದಿಲ್ಲ. ಯಾರಿಗೆ ಇಷ್ಟವಿದೆ ಅವರು ನೀಡಬಹುದು, ಇಷ್ಟವಿಲ್ಲದವರು ನೀಡದೆ ಇರಬಹುದು..

hd-kumarswamy-tweet-replay-for-pejavara-sri-udupi
ಪೇಜಾವರ ಶ್ರೀ ತೀಕ್ಷ್ಣ ಪ್ರತಿಕ್ರಿಯೆ
author img

By

Published : Feb 16, 2021, 5:43 PM IST

ಉಡುಪಿ : ರಾಮ ಜನ್ಮಭೂಮಿ ನಿರ್ಮಾಣದ ನಿಧಿ ಸಂಗ್ರಹಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್​​​ ವಿಚಾರವಾಗಿ ಪೇಜಾವರ ಶ್ರೀ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಪೇಜಾವರ ಶ್ರೀ ತೀಕ್ಷ್ಣ ಪ್ರತಿಕ್ರಿಯೆ

ಓದಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಬಗ್ಗೆ ಹೆಚ್ಚು ಮಹತ್ವ ನೀಡೋದು ಬೇಡ : ರಮೇಶ ಜಾರಕಿಹೊಳಿ

ಇದೊಂದು ಆಧಾರ ರಹಿತವಾದ ಆರೋಪ, ಶ್ರೀ ರಾಮ ಜನ್ಮಭೂಮಿಯ ನಿಧಿ ಸಂಗ್ರಹ ಪಾರದರ್ಶಕವಾಗಿ ನಡೆಯುತ್ತಿದೆ. ದೇಶದ ಪ್ರತಿ ರಾಮಭಕ್ತರ ಮನೆಯನ್ನು ಸಂಪರ್ಕಿಸಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.

ಈ ಉದ್ದೇಶದಿಂದ ನಿಧಿ ಸಂಗ್ರಹದ ಸಮಯದಲ್ಲಿ ಭೇಟಿ ನೀಡಿದ ಮನೆಗಳನ್ನು ಗುರುತು ಮಾಡಿಕೊಳ್ಳುತ್ತಿದ್ದೇವೆ. ಕಾರ್ಯಕರ್ತರು ಸಂಪರ್ಕಿಸದ ಮನೆಗಳನ್ನು ಗುರುತು ಮಾಡಿಕೊಳ್ಳುತ್ತಿದ್ದೇವೆ. ಇದು ನಿಧಿ ಸಮರ್ಪಣೆ ಮಾಡದವರನ್ನು ಗುರುತಿಸುವ ಪ್ರಕ್ರಿಯೆಯಲ್ಲ. ಯಾವ ಮನೆಗಳು ಬಿಟ್ಟು ಹೋಗಿವೆ ಅದನ್ನು ಮರು ಸಂಪರ್ಕ ಮಾಡುವ ನಿಟ್ಟಿನಲ್ಲಿ ಈ ಕೆಲಸ ಸಾಗುತ್ತಿದೆ.

ಇಂತಹ ಮಹತ್ಕಾರ್ಯದ ಬಗ್ಗೆ ಪ್ರತಿಕ್ರಿಯೆ ನೀಡುವಾಗ ಜವಾಬ್ದಾರಿಯುತವಾಗಿ ಇರಬೇಕು ಎಂದರು. ಮಾಜಿ ಸಿಎಂ ಸಿದ್ದರಾಮಯ್ಯ ದೇಣಿಗೆ ನೀಡಲು ನಿರಾಕರಿಸಿದ ವಿಚಾರವಾಗಿ ಮಾತನಾಡಿದ ಶ್ರೀಗಳು, ಯಾರಿಗೂ ನಿಧಿ ಸಮರ್ಪಣೆ ಮಾಡುವಂತೆ ನಾವು ಒತ್ತಾಯಿಸುವುದಿಲ್ಲ. ಯಾರಿಗೆ ಇಷ್ಟವಿದೆ ಅವರು ನೀಡಬಹುದು, ಇಷ್ಟವಿಲ್ಲದವರು ನೀಡದೆ ಇರಬಹುದು ಎಂದರು.

ಇನ್ನು, ರಾಮಜನ್ಮ ಭೂಮಿ ವಿವಾದಿತ ಪ್ರದೇಶ ಎನ್ನುವ ಅವರ ಅಭಿಪ್ರಾಯದ ಬಗ್ಗೆ ನಾವು ಪ್ರತಿಕ್ರಿಯಿಸುವುದಿಲ್ಲ. ದೇಶದ ಸರ್ವೋನ್ನತ ನ್ಯಾಯಾಲಯವೇ ಅಯೋಧ್ಯೆ ರಾಮನ ಜನ್ಮಭೂಮಿ ಎಂದು ಒಪ್ಪಿದೆ. ದೇಶದ ಸರ್ವೋನ್ನತ ನ್ಯಾಯಾಲಯದ ತೀರ್ಪನ್ನು ಅಗೌರವದಿಂದ ಕಾಣುವವರ ಬಗ್ಗೆ ದೇಶ ನಿಷ್ಟೆಯ ಬಗ್ಗೆ ನಮಗೆ ಸಂದೇಹವಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.