ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಬುಧವಾರವೂ ಕೂಡಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದು, ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ, ಪಿಯು ಮತ್ತು ಡಿಗ್ರಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಳೆಯ ಕಾರಣಕ್ಕೆ ಜುಲೈ 23 ರಂದು ಕೂಡಾ ರಜೆ ಘೋಷಿಸಲಾಗಿತ್ತು. ನಾಳೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಮುಂಜಾಗೃತಾ ಕ್ರಮವಾಗಿ ಡಿಸಿ ರಜೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.