ETV Bharat / state

ಉಡುಪಿ ಪದವಿಪೂರ್ವ ಕಾಲೇಜಿನಲ್ಲಿ ಮುಂದುವರೆದ ಹಿಜಾಬ್​ ವಿವಾದ - ಉಡುಪಿ ಕಾಲೇಜಿನಲ್ಲಿ ಹಿಜಾಬ್ ವಿವಾದ

ಕಳೆದ ಮೂರು ವಾರಗಳ ಹಿಂದೆ ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದವು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ನಮಗೆ ಧರ್ಮದ ಕಟ್ಟುಪಾಡುಗಳೇ ಮುಖ್ಯ, ಇದು ನಮ್ಮ ಹಕ್ಕು ಎಂದು ವಿದ್ಯಾರ್ಥಿನಿಯರು ಹಠ ಹಿಡಿದಿದ್ದಾರೆ. ಪರೋಕ್ಷವಾಗಿ ಕೆಲ ಸಂಘಟನೆಗಳು ಸಾಥ್ ನೀಡುತ್ತಿವೆ. ಹೀಗಾಗಿ ಪರಿಸ್ಥಿತಿ ಮತ್ತಷ್ಟು ಇನ್ನಷ್ಟು ಬಿಗಡಾಯಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

hijab controversy continues in udupi college
ಉಡುಪಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್​ ವಿವಾದ
author img

By

Published : Jan 22, 2022, 8:23 PM IST

ಉಡುಪಿ: ಜಿಲ್ಲೆಯ ಮಹಿಳಾ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಹಿಜಾಬ್ ಧರಿಸುವುದು ತಮ್ಮ ಹಕ್ಕು ಎಂದು ವಿದ್ಯಾರ್ಥಿನಿಯರು ಹೇಳಿದರೆ, ಮತ್ತೊಂದೆಡೆ ಕಾಲೇಜು ಆಡಳಿತ ಮಂಡಳಿಯು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ.

ಕಳೆದ ಮೂರು ವಾರಗಳ ಹಿಂದೆ ಆರಂಭವಾದ ಹಿಜಾಬ್ ವಿವಾದವು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ನಮಗೆ ಧರ್ಮದ ಕಟ್ಟುಪಾಡುಗಳೇ ಮುಖ್ಯ, ಇದು ನಮ್ಮ ಹಕ್ಕು ಎಂದು ವಿದ್ಯಾರ್ಥಿನಿಯರು ಹಠಕ್ಕೆ ಬಿದ್ದಿದ್ದು, ಪರೋಕ್ಷವಾಗಿ ಕೆಲ ಸಂಘಟನೆಗಳು ಇದಕ್ಕೆ ಸಾಥ್ ನೀಡುತ್ತಿವೆ. ಹೀಗಾಗಿ ಪರಿಸ್ಥಿತಿ ಮತ್ತಷ್ಟು ಇನ್ನಷ್ಟು ಬಿಗಡಾಯಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ಕಳೆದ 37 ವರ್ಷಗಳಿಂದ ಉಡುಪಿಯ ಪದವಿಪೂರ್ವ ಮಹಿಳಾ ಕಾಲೇಜಿನಲ್ಲಿ ಸರ್ವಧರ್ಮದ ವಿದ್ಯಾರ್ಥಿನಿಯರು ಸಮವಸ್ತ್ರ ಮಾತ್ರ ಧರಿಸಿ ತರಗತಿಗೆ ಹಾಜರಾಗುತ್ತಿದ್ದರು. ಹಿಜಾಬ್ ಧರಿಸಿ ಬಂದವರು, ತರಗತಿ ಪ್ರವೇಶಿಸುವಾಗ ಅದನ್ನು ತೆಗೆದಿರಿಸಿ ಪಾಠ ಕೇಳುತ್ತಿದ್ದರು. ಈಗ ನೂರಕ್ಕೂ ಅಧಿಕ ಮುಸ್ಲಿಂ ವಿದ್ಯಾರ್ಥಿನಿಯರು ಇಲ್ಲಿ ಪಿಯುಸಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಹಿಜಾಬ್ ವಿವಾದ ಅಂತ ಆರಂಭವಾಗಿರುವುದು ಇದೇ ಮೊದಲಾಗಿದೆ. ಕೆಲ ಸಂಘಟನೆಗಳ ಬೆಂಬಲದೊಂದಿಗೆ ವಿದ್ಯಾರ್ಥಿನಿಯರು ಈ ಹೋರಾಟ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ವಿದ್ಯಾರ್ಥಿನಿಯರ ಪ್ರತಿಭಟನೆ: ಹಿಜಾಬ್ ಧರಿಸುವುದು ನಮ್ಮ ಹಕ್ಕು, ನಮ್ಮ ಧರ್ಮವಾಗಿದ್ದು, ಅದನ್ನು ಧರಿಸಿಯೇ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡಿ. ಮಹಿಳಾ ಕಾಲೇಜಾದರೂ ಪುರುಷ ಪ್ರಾಧ್ಯಾಪಕರು ಇದ್ದಾರೆ. ಕಾರ್ಯಕ್ರಮ ನಡೆಯುವ ವೇಳೆ ಹಲವಾರು ಪುರುಷ ಅತಿಥಿಗಳು ಕಾಲೇಜಿಗೆ ಬರುತ್ತಾರೆ. ನಮಗೆ ಹಿಜಾಬ್​​ ಹಾಗೂ ಶಿಕ್ಷಣ ಎರಡೂ ಕೂಡ ಮುಖ್ಯವಾಗಿವೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿನಿಯರು ಹಠ ಹಿಡಿದಿದ್ದಾರೆ. ಕಾಲೇಜಿಗೆ ಬಂದು ತರಗತಿಗೆ ಕೂರದೆ ಹೊರಗಡೆ ಕುಳಿತು ಪ್ರತಿಭಟನೆ ಮುಂದುವರೆಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಕಾಲೇಜು ಅಭಿವೃದ್ಧಿ ಮಂಡಳಿ ಈ ಕುರಿತು ಸಭೆ ನಡೆಸಿ, ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಕೇಳುವುದಕ್ಕೆ ಅವಕಾಶ ಇಲ್ಲ. ಅಗತ್ಯವಿದ್ದರೆ ವರ್ಗಾವಣೆ ಪ್ರಮಾಣಪತ್ರ (TC) ಕೋಡುತ್ತೇವೆ, ಬೇರೆ ಕಾಲೇಜು ಹೋಗಿ ಸೇರಬಹುದು ಎಂದು ಹೇಳಿದೆ. ಈ ಕುರಿತು ಕಾಲೇಜು ಪ್ರಾಂಶುಪಾಲರು ಪಿಯು ಮಂಡಳಿಗೆ ಪತ್ರ ಬರೆದಿದ್ದು, ಅಂತಿಮ ಆದೇಶದ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: ದೇಶದ 1 ಸಾವಿರ ಪ್ರಮುಖ ನಗರಗಳಲ್ಲಿ 5ಜಿ ನೆಟ್​ವರ್ಕ್​ ವಿಸ್ತರಣೆಗೆ ಜಿಯೋ ಸಜ್ಜು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.