ಉಡುಪಿ : ಕಿನ್ನಿಮುಲ್ಕಿ ಪರಿಸರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಗುಡ್ಡಕ್ಕೆ ಬೆಂಕಿ ಬಿದ್ದ ಪರಿಣಾಮ ಸಾವಿರಾರು ಎಕರೆ ಕಾಡು ನಾಶವಾಗಿದೆ.
ಇಲ್ಲಿನ ಹತ್ತಾರು ಎಕರೆ ಪ್ರದೇಶಗಳಿಗೆ ಬೆಂಕಿ ಹಬ್ಬಿದೆ. ಮಧ್ಯಾಹ್ನದ ವೇಳೆ ವಿಪರೀತ ಬಿಸಿಲು ಮತ್ತು ಗಾಳಿ ಇದ್ದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿದೆ. ಒಣಗಿದ್ದ ಹುಲ್ಲಿಗೆ ಬೆಂಕಿ ಹಬ್ಬಿದ ಪರಿಣಾಮ ಆಸುಪಾಸಿನ ಮನೆಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಕೆಲವೇ ನಿಮಿಷಗಳಲ್ಲಿ ಹತ್ತಾರು ಎಕರೆ ಭೂಪ್ರದೇಶಕ್ಕೆ ಬೆಂಕಿ ವ್ಯಾಪಿಸಿತು.
ಉಡುಪಿ ಅಗ್ನಿಶಾಮಕ ದಳದ ವಾಹನವನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು. ಎರಡು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಇದನ್ನೂ ಓದಿ: ಡೆಡ್ಲಿ ವ್ಹೀಲಿಂಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಯುವಕರು ಅರೆಸ್ಟ್