ETV Bharat / state

ಡಿ.ಕೆ.ಶಿವಕುಮಾರ್​ಗೆ ನೈತಿಕತೆ ಇದ್ದರೆ ಸಂಪತ್ ರಾಜ್​ ಶರಣಾಗುವಂತೆ ಹೇಳಲಿ: ಕಟೀಲ್​ - Katil's statement to surrender to Sampath Raj

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಪ್ರಕರಣದಲ್ಲಿ ಸಂಪತ್ ರಾಜ್ ಕೈವಾಡ ಇರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಇದಕ್ಕೆ ಉತ್ತರ ಕೊಡಬೇಕು. ಸಂಪತ್ ರಾಜ್​ನ ಪೊಲೀಸರಿಗೆ ಒಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಹೇಳಿದರು.

naleen-kumar-kateel
ನಳೀನ್ ಕುಮಾರ್ ಕಟೀಲ್​
author img

By

Published : Nov 12, 2020, 5:54 PM IST

ಉಡುಪಿ: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಪ್ರಕರಣದಲ್ಲಿ ಸಂಪತ್ ರಾಜ್ ಕೈವಾಡ ಇದೆ ಎಂಬುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಡಿ.ಕೆ.ಶಿವಕುಮಾರ್​ಗೆ ನೈತಿಕತೆ ಇದ್ದರೆ ಸಂಪತ್ ರಾಜ್​ನ ಶರಣಾಗುವಂತೆ ಹೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಹೇಳಿದರು.

ಈ ಕುರಿತು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಇದಕ್ಕೆ ಉತ್ತರ ಕೊಡಬೇಕು. ಘಟನೆಯಲ್ಲಿ ಸಂಪತ್ ರಾಜ್ ಕೈವಾಡ ಇರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಸಂಪತ್ ರಾಜ್​ನ ಪೊಲೀಸರಿಗೆ ಒಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡಬೇಕು. ಅಖಂಡ ಶ್ರೀನಿವಾಸಮೂರ್ತಿಯನ್ನು ಬಿಜೆಪಿ ಬೆಂಬಲಿಸುತ್ತದೆ. ಅವರಿಗೆ ನ್ಯಾಯ ಕೊಡಿಸುತ್ತದೆ ಎಂದು ಹೇಳಿದರು.

ಉಪ ಚುನಾವಣೆಯಲ್ಲಿ ಎರಡು ಕ್ಷೇತ್ರದ ಸೋಲಿಗೆ ಡಿಕೆಶಿ-ಸಿದ್ದರಾಮಯ್ಯ ಕಾರಣ. ಆರ್​ಆರ್ ನಗರವನ್ನು ಸೋಲಿಸಿದ್ದು ಮಾಜಿ ಸಿಎಂ ಸಿದ್ದರಾಮಯ್ಯ, ಶಿರಾ ಕ್ಷೇತ್ರವನ್ನು ಸೋಲಿಸಿದ್ದು ಡಿ.ಕೆ.ಶಿವಕುಮಾರ್. ಕಾರ್ಯಕರ್ತರಿಗೆ ಈ ವಿಚಾರ ತಿಳಿದು ಅವರ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​

ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲಾ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿಗಳ ತೀರ್ಮಾನದ ನಂತರ ಪಕ್ಷದೊಳಗೆ ಚರ್ಚೆಯಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಯಡಿಯೂರಪ್ಪನವರು ಅನುಭವಿಗಳು. ರಾಜ್ಯದ ಹಿತದೃಷ್ಟಿಯಿಂದ ಸಂಪುಟ ವಿಸ್ತರಣೆ ಮಾಡುತ್ತಾರೆ. ಯಡಿಯೂರಪ್ಪನವರಿಗೆ ಸಲಹೆ ಕೊಡುವ ಶಕ್ತಿ ನನಗಿಲ್ಲ ಎಂದರು.

ಬಸನಗೌಡ ಪಾಟೀಲ್ ಯತ್ನಾಳ್ ಭಿನ್ನಮತ ವಿಚಾರವಾಗಿ ಮಾತನಾಡಿ, ರಾಜ್ಯದಲ್ಲಿ ಪಕ್ಷ ಮತ್ತು ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಪಕ್ಷದ ಸೀಮಿತತೆ ಮತ್ತು ನಿಯಮವನ್ನು ಮೀರಿ ಯಾರೂ ವರ್ತಿಸಬಾರದು. ಪಕ್ಷದ ನಿಯಮಗಳ ಅಡಿಯಲ್ಲೇ ಎಲ್ಲರೂ ಮಾತನಾಡಬೇಕು. ಬಸನಗೌಡ ಪಾಟೀಲ್ ಯತ್ನಾಳ್​ಗೆ ಏನು ಮಾಡಬೇಕು ಅದನ್ನು ಮಾಡುತ್ತೇವೆ ಎಂದು ಕಟೀಲ್ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.