ಉಡುಪಿ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಲ್ಲಿ ಉಸಿರಾಟದ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹಾಗಾಗಿ, ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಪ್ಲಾಂಟ್‌ನ ಅಳವಡಿಸಲಾಗುತ್ತಿದೆ.
ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಪ್ಲಾಂಟ್ ನಿರ್ಮಾಣ ಮಾಡಲಾಗಿದೆ. 6,000 ಲೀಟರ್ ಆಕ್ಸಿಜನ್ ಸಾಮರ್ಥ್ಯ ಈ ಸಿಲಿಂಡರ್ ಹೊಂದಿದೆ. ಅಕ್ಟೋಬರ್ ತಿಂಗಳ ಆರಂಭದಲ್ಲಿ ಪ್ಲಾಂಟ್‌ನ ಕಾರ್ಯಾಚರಣೆ ಆರಂಭವಾಗಲಿದೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಕೊರೊನಾ ರೋಗಿಗಳು ಇದರ ಉಪಯೋಗ ಪಡೆಯಲಿದ್ದಾರೆ.