ಉಡುಪಿ: ಜಿಲ್ಲೆಯಲ್ಲಿ ಜಿಲ್ಲಾ ಕೇಂದ್ರ ತಾಲೂಕು ಆಸ್ಪತ್ರೆಯನ್ನು ಜಿಲ್ಪಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಬಗ್ಗೆ ಜಿಲ್ಲೆಯಲ್ಲಿ ಮತ್ತೆ ಹೋರಾಟ ಶುರುವಾಗಿದೆ. ಕಳೆದ ಹಲವಾರು ವರ್ಷಗಳಿಂದ ಉಡುಪಿ ಜಿಲ್ಲಾ ತಾಲೂಕು ಆಸ್ಪತ್ರೆ ಬೋರ್ಡಿನಲ್ಲಿ ಮಾತ್ರ ಜಿಲ್ಲಾಸ್ಪತ್ರೆ ಅಂತಾ ಬರೆಯಲಾಗಿದೆ. ಆದರೆ ಜಿಲ್ಲಾ ಸರ್ಕಾರಿ ಆಸ್ಪತ್ರೆ ಸೌಲಭ್ಯದ ಭಾಗ್ಯ ಇನ್ನು ಸಿಕ್ಕಿಲ್ಲ.
ಜಿಲ್ಲೆಯಲ್ಲಿ 22 ಲಕ್ಷ ಜನಸಂಖ್ಯೆ ಹೊಂದಿದ್ದರೂ, ಸರ್ಕಾರಿ ಜಿಲ್ಲಾ ಆಸ್ಪತ್ರೆ ಯ ಸೌಲಭ್ಯ ಇನ್ನೂ ಸಿಕ್ಕಿಲ್ಲ. ಇರುವ ಆಸ್ಪತ್ರೆ ಇನ್ನೂ ತಾಲೂಕು ಆಸ್ಪತ್ರೆ ಯಾಗಿಯೇ ಉಳಿದಿದೆ. ಖಾಸಗಿ ಆಸ್ಪತ್ರೆಯನ್ನೇ ಆಶ್ರಯಿಸಬೇಕಿದೆ ಬಡವರು ಮತ್ತು ಮಧ್ಯಮ ವರ್ಗ ಜನರಿಗೆ ಸರ್ಕಾರಿ ಆಸ್ಪತ್ರೆಯ ಪೂರ್ಣ ಸೌಲಭ್ಯದಿಂದ ದೂರ ಉಳಿಯುವಂತಾಗಿದೆ.
ಖಾಸಗಿ ಆಸ್ಪತ್ರೆ ಲಾಭಿಗೆ ಮಣಿದ ಜನಪ್ರತಿನಿಧಿಗಳು ಮತ್ತು ಸರ್ಕಾರ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಮೀನಾ ಮೇಷ ಎಣಿಸುತ್ತಿದೆ. ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಹೆಚ್ಚಿದ ಒತ್ತಾಯ ಹೆಚ್ಚುತ್ತಿದ್ದು ಜಿಲ್ಲೆಯ ಯುವಶಕ್ತಿ ಸಂಘಟನೆ ಯಿಂದ ಮತ್ತೆ ಹೋರಾಟ ಕ್ಕೆ ಸಿದ್ದತೆ ನಡೆದಿದೆ.