ಉಡುಪಿ: ಕಾಂಗ್ರೆಸ್ ಕಾರ್ಯಕರ್ತನ ಮನೆ ಮೇಲೆ ಐಟಿ ದಾಳಿ ನಡೆದಿದೆ. ಕಟ್ಟೆಗುಡ್ಡೆ ಸದಾಶಿವ್ ಅಮೀನ್ ಎಂಬವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉಡುಪಿ ತಾಲೂಕಿನ ಉದ್ಯಾವರ ಗ್ರಾಮದ ನಿವಾಸಿ ಸದಾಶಿವ್ ಫೈನಾನ್ಸ್ ಮ್ಯಾನೇಜರ್ ಆಗಿದ್ದು, ಸ್ಥಳೀಯ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಮನೆಯಲ್ಲೇ ಕೆಲವು ಗಂಟೆಗಳ ಕಾಲ ದಾಖಲೆ ಪರಿಶೀಲನೆ ಮಾಡಿ ಹೆಚ್ಚಿನ ವಿಚಾರಣೆಗೆ ಕಚೇರಿಗೆ ಕರೆದೊಯ್ದಿದ್ದಾರೆ.
ಉಡುಪಿ ತಹಶೀಲ್ದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಿದ್ದಾರೆ. ಚುನಾವಣೆ ಹಿನ್ನೆಲೆ ದಾಳಿ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ.