ETV Bharat / state

ಉಡುಪಿ: ಸಮಾಜ ಸೇವಕ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ - ರಾಜಕೀಯ ಮುಖಂಡ

ಸಮಾಜ ಸೇವಕ ಮತ್ತು ನಾಟಕಕಾರ ಕಾಪು ಲೀಲಾಧರ ಶೆಟ್ಟಿ ಅವರು ತಮ್ಮ ಪತ್ನಿ ವಸುಂಧರಾ ಶೆಟ್ಟಿ ಜೊತೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

Kapu Leeladhara Shetty  wife Vasundhara Shetty  committed suicide  committed suicide in Udupi  ನಾಟಕಕಾರ ಕಾಪು ಲೀಲಾಧರ ಶೆಟ್ಟಿ  ಪತ್ನಿ ವಸುಂಧರಾ ಶೆಟ್ಟಿ ಆತ್ಮಹತ್ಯೆಗೆ ಶರಣು  ಪತ್ನಿ ವಸುಂಧರಾ ಶೆಟ್ಟಿ ಜೊತೆ ಆತ್ಮಹತ್ಯೆ  ಸಮಾಜ ಸೇವಕ ಮತ್ತು ನಾಟಕಕಾರ  ರಾಜಕೀಯ ಮುಖಂಡ  ಕಾಪು ವಿಧಾನಸಭಾ ಕ್ಷೇತ್ರ
ಪತ್ನಿ ವಸುಂಧರಾ ಶೆಟ್ಟಿ ಆತ್ಮಹತ್ಯೆಗೆ ಶರಣು
author img

By ETV Bharat Karnataka Team

Published : Dec 13, 2023, 9:58 AM IST

Updated : Dec 13, 2023, 10:59 AM IST

ಉಡುಪಿ: ಸಮಾಜ ಸೇವಕ, ರಾಜಕೀಯ ಮುಖಂಡ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ದಂಪತಿ ಜೊತೆ ಜೊತೆಯಾಗಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಜಿಲ್ಲೆಯ ಕಾಪುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಇವರಿಬ್ಬರು ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ವರದಿಯಾಗಿದೆ.

ಲೀಲಾಧರ ಶೆಟ್ಟಿಯವರು ಕಾಪುವಿನಲ್ಲಿ ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಸದಾ ಸಮಾಜಪರ ಕಾಳಜಿ ಹೊಂದಿದ್ದ ಅವರು ಯಾವುದೇ ಕ್ಷಣದಲ್ಲಿ ಕೂಡ ಅಶಕ್ತರ ನೆರವಿಗೆ ಧಾವಿಸುತ್ತಿದ್ದರು. ಇವರು ಒಂದು ಬಾರಿ ಕಾಪು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೂ ಸ್ಪರ್ಧಿಸಿದ್ದರು. ಆದರೂ ಇತ್ತೀಚೆಗೆ ಹಣಕಾಸಿನ ತೊಂದರೆ ಕೂಡ ಹೊಂದಿದ್ದರು ಎನ್ನಲಾಗಿದೆ. ಕೌಟುಂಬಿಕ‌ ಕಾರಣದಿಂದ ಮನನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಓದಿ: ಚಿಕ್ಕಮಗಳೂರು: ಗೃಹಿಣಿ ಅನುಮಾನಾಸ್ಪದ ಸಾವು.. ಪತಿ ವಿರುದ್ಧ ಕೊಲೆ ಆರೋಪ

Last Updated : Dec 13, 2023, 10:59 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.