ಉಡುಪಿ: ರಸ್ತೆ ಬದಿ ಮೊಬೈಲ್ ಕರೆಯಲ್ಲಿ ನಿರತರಾಗಿದ್ದ ಮುಖ್ಯ ಶಿಕ್ಷಕರೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ಸಾವನ್ನಪ್ಪಿದ ಘಟನೆ ನಗರದಲ್ಲಿ ನಡೆದಿದೆ.
ವಸಂತ ದೇವಾಡಿಗ ಮೃತ ದುರ್ದೈವಿ. ಕಾರ್ಕಳದ ನಿಟ್ಟೆ ಎಂಬಲ್ಲಿ ಈ ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮೊಬೈಲ್ ಸಂಭಾಷಣೆಯಲ್ಲಿ ತೊಡಗಿದ್ದ ವಸಂತ್ಗೆ ಕಾರ್ಕಳದಿಂದ ಪಡುಬಿದ್ರಿ ಕಡೆಗೆ ಸಾಗುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ.
ಓದಿ-ಗೋಮಾಂಸ ರಫ್ತಿನಲ್ಲಿ ಬಿಜೆಪಿಯವರೇ ಮುಂದು: ರಾಘವೇಂದ್ರ ಹಿಟ್ನಾಳ್
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವಂಸತ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.