ಉಡುಪಿ: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, ಕೇರಳದ ಕಣ್ಣೂರು ನಿವಾಸಿ ಮಣಿಪಾಲದ ಕೆಎಂಸಿಯಲ್ಲಿ ಸಾವನ್ನಪ್ಪಿದ್ದಾರೆ.
ಜೂನ್ ತಿಂಗಳಿನಿಂದ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಮೃತಪಟ್ಟಿದ್ದ ಇವರ ಕೊರೊನಾ ವರದಿ ಪಾಸಿಟಿವ್ ಬಂದಿದೆ.
ಉಡುಪಿಯಲ್ಲೇ ಮೃತನ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.