ಉಡುಪಿ: ಕುಂದಾಪುರ ತಾಲೂಕು ಹಾಲಾಡಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಮೃತಪಟ್ಟಿದ್ದಾರೆ.
ಶಂಕರನಾರಾಯಣದಲ್ಲಿ ಕಾರ್ಯಕ್ರಮ ಮುಗಿಸಿ ಹಾಲಾಡಿಗೆ ಬರುತ್ತಿರುವ ವೇಳೆ ಹಾಲಾಡಿಯಲ್ಲಿ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹದ್ದೂರು ರಾಜೀವ್ ಶೆಟ್ಟಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಪ್ರಸ್ತುತ ಕೆಎಂಎಫ್ ನಿರ್ದೇಶಕರಾಗಿರುವ ಹದ್ದೂರು ರಾಜೀವ್ ಶೆಟ್ಟಿ ಶಂಕರನಾರಾಯಣ ತಾಲೂಕು ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ ಬಳಿ ಅಪಘಾತ: ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಸಾವು - ಅಪಘಾತದಲ್ಲಿ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ
ಹಾಲಾಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಮೃತಪಟ್ಟಿದ್ದಾರೆ.