ETV Bharat / state

ಸಿದ್ದರಾಮಯ್ಯ ಹಗಲುಗನಸು ಕಾಣುವುದನ್ನು ನಿಲ್ಲಿಸಲಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಸಿಎಂ ಬದಲಾವಣೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.

Kota Shrinivas Poojari Reaction on Siddharamaiah's Statement
ಸಚಿವ ಕೋಟ ಶ್ರೀನಿವಾಸ ಪೂಜಾ
author img

By

Published : Nov 6, 2020, 8:55 PM IST

ಉಡುಪಿ: ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಲಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಹಗಲುಗನಸು ಕಾಣುವುದನ್ನು ನಿಲ್ಲಿಸಲಿ. ರಾಜ್ಯದ ಎಲ್ಲಾ ಸಂಕಷ್ಟದ ಕಾಲದಲ್ಲಿಯೂ ಯಡಿಯೂರಪ್ಪನವರು ಸಮರ್ಥವಾಗಿ ಅಧಿಕಾರ ನಿರ್ವಹಿಸಿದ್ದಾರೆ. ಸಿದ್ದರಾಮಯ್ಯನವರಿಗೆ ಅಲ್ಲಾವುದ್ದೀನ್​ ​ಯಾವ ಅದ್ಭುತ ದೀಪ ಮಾಹಿತಿ ಕೊಟ್ಟಿದೆಯೋ ಗೊತ್ತಿಲ್ಲ. ಸಿಎಂ ಬಿಎಸ್​ವೈ ರಾಜ್ಯದ ಸರ್ವೋಚ್ಚ ಮುಖಂಡ. ಯಡಿಯೂರಪ್ಪ ಶಾಶ್ವತ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಕೇಂದ್ರ ಮತ್ತು ರಾಜ್ಯದ ಎಲ್ಲಾ ನಾಯಕರ ಸಹಮತ ಯಡಿಯೂರಪ್ಪನವರಿಗೆ ಇದೆ ಎಂದರು.

ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಉಪ ಚುನಾವಣೆ ಬಳಿಕ ಡಿಕೆಶಿ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿ, ಕಾಂಗ್ರೆಸ್‌ನ ಆಂತರಿಕ ವಿಚಾರದಲ್ಲಿ ನಾವು ಮೂಗು ತೂರಿಸಲ್ಲ. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಡಿಕೆಶಿಗೆ ಮಾಹಿತಿ ಸಿಕ್ಕಿರಬಹುದು. ಡಿಕೆಶಿ, ಸಿದ್ದರಾಮಯ್ಯ ಮೇಲೆ ಮುನಿಸಿಕೊಂಡಿರಬಹುದು. ಸಿದ್ದರಾಮಯ್ಯನವರ ವಿರುದ್ಧ ದೂರು ಕೊಡಲು ದೆಹಲಿ ಪ್ರವಾಸ ಮಾಡಿರಬಹುದು. ಕಾಂಗ್ರೆಸ್​ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ ಎಂದು ಹೇಳಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.