ETV Bharat / state

ಸಾಮರ್ಥ್ಯಕ್ಕೆ ಅನುಗುಣವಾಗಿ ಹೈಕಮಾಂಡ್​ ಜವಾಬ್ದಾರಿ ನೀಡಿದೆ: ವಿಜಯೇಂದ್ರ ರಾಜ್ಯಾಧ್ಯಕ್ಷ ಆಯ್ಕೆಗೆ ಕೋಟ ಶ್ರೀನಿವಾಸ ಪೂಜಾರಿ ಹರ್ಷ - new Karnataka BJP chief

ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿದ ಬಗ್ಗೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹರ್ಷ ವ್ಯಕ್ತಪಡಿಸಿದ್ದಾರೆ.

Kota Srinivas Poojary react on BJP chief

author img

By ETV Bharat Karnataka Team

Published : Nov 11, 2023, 8:49 PM IST

ಉಡುಪಿ: ಬಿಜೆಪಿ ಹೈಕಮಾಂಡ್ ಬಹಳ ಸಮರ್ಥ, ಯುವಕ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ, ಶಾ, ನಡ್ದಾ, ಬಿಎಲ್ ಸಂತೋಷ್ ಈ ಆಯ್ಕೆ ಮಾಡಿದ್ದಾರೆ. ಬಿಜೆಪಿಯ ಉಪಾಧ್ಯಕ್ಷನಾಗಿ ಕೆಲಸ ಮಾಡಿದವರಿಗೆ ರಾಜ್ಯಾಧ್ಯಕ್ಷ ಪಟ್ಟ ಒಲಿದಿದೆ. ಬಿಜೆಪಿಯ ಇಡೀ ತಂಡ ವಿಜಯೇಂದ್ರ ಜೊತೆ ಒಟ್ಟಾಗಿ ನಿಲ್ಲುತ್ತದೆ. ಮುಂದಿನ ಚುನಾವಣೆಯಲ್ಲಿ ಅದರ ಫಲಿತಾಂಶ ಹೊರಬೀಳಲಿದೆ ಎಂದರು.

ಪಕ್ಷದೊಳಗಿನ ಕೆಲವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಾಮರ್ಥ್ಯಕ್ಕೆ ಅನುಗುಣವಾಗಿ ಜವಾಬ್ದಾರಿಯನ್ನು ಹೈಕಮಾಂಡ್​ ನೀಡಿದೆ. ಎಲ್ಲ ಸಮಾಜವನ್ನು ಒಟ್ಟುಗೂಡಿಸಿಕೊಂಡು ಒಂದು ರಾಜಕೀಯ ಪಕ್ಷವನ್ನು ಕಟ್ಟಲಾಗುತ್ತದೆ. ಸರ್ವವ್ಯಾಪಿ ಸರ್ವಸ್ಪರ್ಶಿ ಸಮುದಾಯ ಗಮನದಲ್ಲಿಟ್ಟುಕೊಂಡು ಪ್ರತಿಪಕ್ಷ ನಾಯಕನ ಆಯ್ಕೆ ಮಾಡುವಂತದು. ವಿಜೇಯಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ ವಿಚಾರದಲ್ಲಿ ಶ್ರೀರಾಮುಲು, ಸಿಟಿ ರವಿ ಅವರಲ್ಲಿ ಬೇಸರವಿಲ್ಲ. ಎಲ್ಲರೂ ಜೊತೆಯಾಗಿ ಪಕ್ಷ ಸಂಘಟನೆಯ ಕೆಲಸವನ್ನು ಮಾಡುತ್ತಾರೆ. ವಿಧಾನಸಭೆ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕನ ಆಯ್ಕೆ ಕೂಡ ಆಗುತ್ತದೆ ಎಂದರು.

ಪಕ್ಷ ಕಳೆದ ಬಾರಿ ನನಗೆ ಪ್ರತಿಪಕ್ಷ ನಾಯಕರ ಸ್ಥಾನದ ಅವಕಾಶ ಕೊಟ್ಟಿತ್ತು. ಈ ಬಾರಿ ಪಕ್ಷ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಗೊತ್ತಿಲ್ಲ. ಅವಕಾಶ ಕೊಟ್ಟರೆ ನಿಭಾಯಿಸುತ್ತೇನೆ ಎಂದು ಹೇಳಿದ್ದೇನೆ. ಪಕ್ಷದ ಪ್ರತಿಪಕ್ಷ ನಾಯಕನಾಗುವ ಅವಕಾಶ ಕೊಟ್ಟರೆ ನಾನು ಸ್ವೀಕಾರ ಮಾಡಿ ನಿಭಾಯಿಸುತ್ತೇನೆ. 34 ಜನ ಮೇಲ್ಮನೆ ಸದಸ್ಯರಿದ್ದಾರೆ, ಯಾರನ್ನು ಮಾಡಬೇಕು ಎಂದು ಪಕ್ಷ ನಿರ್ಧರಿಸುತ್ತದೆ. ಹುದ್ದೆಗಳಿಗೆ ನಿರಾಸಕ್ತಿ ಇರುವವರು ಇರೋದಿಲ್ಲ. ಎಲ್ಲರಿಗೂ ಆಸಕ್ತಿ ಇರುತ್ತದೆ ಎಂದರು.

ಇದೇ ವೇಳೆ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿಗಳೇ ಮತ್ತು ಸಚಿವ ತಂಗಡಗಿ ಅವರೇ ಇನ್ನು ಸಹಿಸಲು ಸಾಧ್ಯವಿಲ್ಲ. ಒಂದು ವಾರದೊಳಗೆ ಸಮುದಾಯ ಭವನಕ್ಕೆ 100 ಕೋಟಿ ರೂ. ಬಿಡುಗಡೆ ಮಾಡಿದ ಹಣ ನೀಡಬೇಕು. ಇಲ್ಲದಿದ್ದರೆ ಹಿಂದುಳಿದ ವರ್ಗದ ಶಾಸಕರು ಸೇರಿ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಹಣ ಬಿಡುಗಡೆ ಆಗದ ಹಿನ್ನೆಲೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮತ್ತು ಜನರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸರ್ಕಾರ ಗಮನ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ. ರಾಜ್ಯದಲ್ಲಿ 2400 ಹಾಸ್ಟೆಲ್​ಗಳಿವೆ, 1 ಲಕ್ಷ ವಿದ್ಯಾರ್ಥಿಗಳು ಹಾಸ್ಟೆಲ್​ಗೆ ಬೇಡಿಕೆ ಇರಿಸಿದ್ದಾರೆ. ವಿದ್ಯಾರ್ಥಿ ನಿಲಯ ಇಲ್ಲದೇ ಶಿಕ್ಷಣ ಪಡೆಯಲು ಹಿಂದುಳಿದ ಮಕ್ಕಳಿಗೆ ತೊಂದರೆ ಆಗುತ್ತದೆ. ಬಿಜೆಪಿ ಸರ್ಕಾರ ಇದ್ದಾಗ 30000 ವಿದ್ಯಾರ್ಥಿಗಳಿಗೆ ಹಾಸ್ಟೆಲ್​ನಲ್ಲಿ ಅವಕಾಶ ಕಲ್ಪಿಸಿತ್ತು. ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಅವಕಾಶ ಮಾಡಿದ್ದೆವು. ಟೆಂಡರ್ ಮಾಡಿ ಹಿಂದುಳಿದ ವರ್ಗದ ಮಹಿಳೆಯರಿಗೆ 10,000 ಹೊಲಿಗೆ ಯಂತ್ರ ಹಂಚಲು ಯೋಜನೆ ರೂಪಿಸಿದ್ದೆವು. ಈ ಬಗ್ಗೆ ಫಲಾನುಭವಿಗಳ ಆಯ್ಕೆಯು ಆಗಿತ್ತು. ಹಿಂದುಳಿದ ವರ್ಗವನ್ನು ಸರ್ಕಾರ ತುಂಬಾ ನಿರ್ಲಕ್ಷ್ಯ ಮಾಡುತ್ತಿದೆ. ಆಗಸ್ಟ್ ತಿಂಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 100 ಕೋಟಿಗೆ ಅನುಮೋದನೆ ಕೊಟ್ಟು ಹಣ ಬಿಡುಗಡೆ ಮಾಡಿತ್ತು. ಆದರೆ, ಇದರ ಪ್ರಯೋಜನ ಇವತ್ತಿಗೂ ಸಿಗಲಿಲ್ಲ. ಸಮುದಾಯ ಭವನ ನಿರ್ಮಿಸಿ ಇಲಾಖೆಗೆ ವರದಿ ಕೊಟ್ಟರು ಹಣ ಬಿಡುಗಡೆ ಮಾಡಿಲ್ಲ. ಅನೇಕ ಸ್ವಾಮೀಜಿಗಳು, ಮುಖಂಡರು ಈ ಬಗ್ಗೆ ಗಮನ ಸೆಳೆದಿದ್ದಾರೆ ಎಂದರು.

ಇದನ್ನೂ ಓದಿ: ನಾನೇನು ರಾಜಕೀಯ ಸನ್ಯಾಸಿಯಲ್ಲ, ಲೋಕಸಭಾ ಚುನಾವಣೆ ನಂತರ ವೈಯಕ್ತಿಕ ರಾಜಕಾರಣ ಮಾಡುತ್ತೇನೆ: ಸಿ ಟಿ ರವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.