ಉಡುಪಿ: ಸಿಎಂ ಬಿ.ಎಸ್. ಯಡಿಯೂರಪ್ಪನವರ ಸಂಪರ್ಕಕ್ಕೆ ಬಂದಿದ್ದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ವತಃ ಹೋಂ ಕ್ವಾರಂಟೈನ್ ಆಗಿದ್ದಾರೆ. ಬ್ರಹ್ಮಾವರ ತಾಲೂಕಿನ ಕೋಟ ಗ್ರಾಮದ ಮನೆಯಲ್ಲಿ ಕ್ವಾರಂಟೈನ್ ಆಗಿರುವ ಪೂಜಾರಿ, ಮಂಗಳವಾರ ಕೋವಿಡ್ ಟೆಸ್ಟ್ ಮಾಡಿಸಲಿದ್ದಾರೆ.
ಸಚಿವರು ಜುಲೈ 30ಕ್ಕೆ ಸಿಎಂ ಸಂಪರ್ಕಕ್ಕೆ ಬಂದಿದ್ದರು. ಐದು ದಿನವಾದರೂ ಯಾವುದೇ ರೋಗದ ಲಕ್ಷಣಗಳು ಕಂಡು ಬಂದಿಲ್ಲ. ಮುಂಜಾಗ್ರತಾ ದೃಷ್ಟಿಯಿಂದ ಕ್ವಾರಂಟೈನ್ ಆಗಿದ್ದೇನೆ. ವರದಿ ನೆಗೆಟಿವ್ ಬಂದರೆ. ಕೆಲಸ ಕಾರ್ಯ ಮುಂದುವರೆಸುತ್ತೇನೆ ಅಂತಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.