ಉಡುಪಿ: ಅಮಾಸೆಬೈಲು ಪೊಲೀಸ್ ಠಾಣೆಯ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಸಿಬ್ಬಂದಿ, ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಎಸ್ಆರ್ಪಿ (IRB) ಸಿಬ್ಬಂದಿ ಮಲ್ಲಿಕಾರ್ಜುನ್ ಗುಬ್ಬಿ (56) ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕಲಬುರಗಿಯ ನೌರುಗಂಜ್ ನಿವಾಸಿಯಾದ ಮಲ್ಲಿಕಾರ್ಜುನ್, ಮೇ 16 ರಂದು ನಕ್ಸಲ್ ಪೀಡಿತ ಅಮಾಸೆಬೈಲು ಠಾಣೆಗೆ ಭದ್ರತೆಗಾಗಿ ನಿಯೋಜನೆಯಾಗಿದ್ದರು. ಮೂರು ತಿಂಗಳ ಹಿಂದೆ ಕೊಪ್ಪಳದ ಮುನಿರಾಬಾದ್ಗೆ ವರ್ಗಾವಣೆಗೊಂಡಿದ್ದ ಇವರು, ಶನಿವಾರ ಮುನಿರಾಬಾದ್ಗೆ ತೆರಳುವವರಿದ್ದರು. ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.