ಉಡುಪಿ: ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಇಂದು ಕುಂದಾಪುರ ತಾಲೂಕಿನ ವೆಂಕಟರಮಣ ಕಾಲೇಜಿನಲ್ಲಿ ಕೇಸರಿ ಶಾಲು ತೊಟ್ಟು ಕಾಲೇಜಿಗೆ ಬಂದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ತಡೆದಿದ್ದಾರೆ.
ಮೆರವಣಿಗೆ ನಡೆಸುತ್ತಾ ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ವಿದ್ಯಾರ್ಥಿಗಳನ್ನು ಕುಂದಾಪುರ ಎಸ್ಐ ಸದಾಶಿವ ಗವರೋಜಿ ಕಾಲೇಜಿನ ಮೈದಾನದಲ್ಲಿ ತಡೆದಿದ್ದಾರೆ. ಕೇಸರಿ ಶಾಲು ಹಾಕಿಕೊಂಡು ಬಂದರೆ ಪ್ರವೇಶ ನೀಡುವುದಿಲ್ಲ. ಸ್ಕಾರ್ಫ್, ಬುರ್ಖಾ ಧರಿಸಿ ಕಾಲೇಜಿಗೆ ಬರುವಂತಿಲ್ಲ ಎಂದು ವೆಂಕಟರಮಣ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಖಡಕ್ ಆಗಿ ಹೇಳಿ ಕಳಿಸಿದ್ದಾರೆ.
ಪ್ರಾಂಶುಪಾಲರ ಹೇಳಿಕೆಗೆ ವಾಗ್ವಾದ ನಡೆಸಿದ ವಿದ್ಯಾರ್ಥಿಗಳು ಕಾಲೇಜಿನ ಆವರಣಕ್ಕೆ ಸ್ಕಾರ್ಫ್, ಬುರ್ಖಾ ಹಾಕಿ ಬರುವಂತಿಲ್ಲ. ಬುರ್ಖಾ, ಹಿಜಾಬ್ ಧರಿಸಿ ಬಂದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹಿಜಾಬ್ - ಕೇಸರಿ ಶಾಲು ವಿವಾದ: ಕೇಸರಿ ಶಾಲು ಧರಿಸಿ ಬಂದ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು