ಉಡುಪಿ: ಜಿಲ್ಲೆಯ ಮಣಿಪಾಲ ಸಮೀಪದ ವಿಜಯನಗರ ಕೋಡಿ ಎಂಬಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
![Leopard caught by forest department in udupi](https://etvbharatimages.akamaized.net/etvbharat/prod-images/kn-udp-03-05-chirathe-bonige-7202200-avjpg_05092020175627_0509f_1599308787_168.jpg)
ಕಳೆದ ಕೆಲ ದಿನಗಳಿಂದ ವಿಜಯನಗರ ಕೋಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ರಾತ್ರಿ ವೇಳೆ ಕಾಣಿಸಿಕೊಳ್ಳುತ್ತಿದ್ದ ಈ ಚಿರತೆ ಜನರಲ್ಲಿ ಭೀತಿ ಹುಟ್ಟಿಸಿತ್ತು. ಜೊತೆಗೆ ಸುತ್ತಮುತ್ತಲಿನ ಮನೆಗಳ ಹಟ್ಟಿಯಲ್ಲಿದ್ದ ಕರು, ನಾಯಿ, ಕೋಳಿಗಳನ್ನು ತಿನ್ನುತ್ತಿತ್ತು. ಚಿರತೆಯ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಭಾಗದ ಜನರು ರಾತ್ರಿ ವೇಳೆ ಹೊರಬರಲು ಭಯಪಡುತ್ತಿದ್ದರು.
ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಚಿರತೆ ಸೆರೆ ಹಿಡಿಯಲು ಬೋನು ಇರಿಸಿದ್ದರು. ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.