ಉಡುಪಿ: ನಾಲ್ಕು ತಿಂಗಳ ಬಾಕಿ ವೇತನ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಬಿಸಿಯೂಟ ನೌಕರರನ್ನು ಖಾಯಂಗೊಳಿಸಿ, ಶಾಸನಾತ್ಮಕ ಸವಲತ್ತು ಜಾರಿ ಮಾಡಬೇಕು. ಕನಿಷ್ಠ 6 ತಿಂಗಳವರೆಗೆ ಪಡಿತರ ಒದಗಿಸಬೇಕು. ಲಾಕ್ಡೌನ್ ಅವಧಿಯಲ್ಲಿ 7500 ರೂಪಾಯಿಯಂತೆ 6 ತಿಂಗಳವರೆಗೆ ನೀಡಬೇಕು ಎಂದು ಆಗ್ರಹಿಸಿದರು.
ನೌಕರರಿಗೆ ಎಲ್ಐಸಿ ಆಧಾರಿತ ಪಿಂಚಣಿ ಜಾರಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿ, ಸರ್ಕಾರಕ್ಕೆ ಆಗ್ರಹಿಸಲಾಯಿತು.