ETV Bharat / state

ಪಕ್ಷ ವಿರೋಧಿ ಹೇಳಿಕೆ ನೀಡಿದರೆ ಹೈಕಮಾಂಡ್​ನಿಂದ ಸೂಕ್ತ ಕ್ರಮ: ಸಚಿವ ಶೆಟ್ಟರ್​ - ಉಡುಪಿ ಸುದ್ದಿ

ಇಂತಹ ಮಾತುಗಳನ್ನು ಆಡಬಾರದು ಎಂದು ಹೈಕಮಾಂಡ್ ಸ್ಪಷ್ಟ ನಿರ್ದೇಶನ ನೀಡಿದ್ದರೂ ಸಹ ಪಕ್ಷ ವಿರೋಧಿ ಹೇಳಿಕೆಗಳನ್ನು ಕೆಲವರು ನೀಡುತ್ತಿದ್ದಾರೆ. ಅಂತವರ ವಿರುದ್ಧ ಸೂಕ್ತ ಕ್ರಮವನ್ನು ಪಕ್ಷ ಕೈಗೊಳ್ಳಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

udupi
ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್
author img

By

Published : Jul 6, 2021, 9:51 AM IST

ಉಡುಪಿ: ಪಕ್ಷ ವಿರೋಧ ಹೇಳಿಕೆ ನೀಡುವವರ ವಿರುದ್ಧ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, ಯತ್ನಾಳ್ ಹಾಗೂ ಸಿ.ಪಿ ಯೋಗೀಶ್ವರ್ ನೀಡುತ್ತಿರುವ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದರು.

ಇಂತಹ ಮಾತುಗಳನ್ನಾಡಬಾರದು ಎಂದು ಹೈಕಮಾಂಡ್ ಸ್ಪಷ್ಟ ನಿರ್ದೇಶನವನ್ನೇ ನೀಡಿದೆ. ಎಲ್ಲ ಹೇಳಿಕೆಗಳನ್ನು ಹೈಕಮಾಂಡ್ ಗಮನಿಸುತ್ತಿದೆ. ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದರು.

ಕುಮಾರಸ್ವಾಮಿ-ಸುಮಲತಾ ವಾಗ್ವಾದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯಕ್ತಿಕ ವಿಚಾರ. ಈ ಚರ್ಚೆಯಲ್ಲಿ ನಾನು ಭಾಗಿಯಾಗಲ್ಲ ಎಂದು ತಿಳಿಸಿದರು.

ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಪ್ರತಿಕ್ರಿಯೆ

ಕೊರೊನಾದಿಂದ ಕೈಗಾರಿಕೆಗಳ ಮೇಲೆ ಪರಿಣಾಮ ಆಗಿರಬಹುದು. ಆದರೆ ರಾಜ್ಯದಲ್ಲಿ ಅತೀ ಹೆಚ್ಚು ಕೈಗಾರಿಕಾ ಬೆಳವಣಿಗೆ ಆಗಿದೆ. ದೇಶದ ಇತರ ರಾಜ್ಯಗಳಿಗೆ ಹೋಲಿಸಿದಾಗ ಉತ್ತಮ ಸ್ಥಿತಿ ಇದೆ. ಕೇವಲ ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಹೊಸ ಕೈಗಾರಿಕಾ ನೀತಿಯಲ್ಲಿ ಈ ವಿಚಾರಕ್ಕೆ ಒತ್ತು ನೀಡಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.