ಉಡುಪಿ: ಇಲ್ಲಿನ ಬ್ರಹ್ಮಗಿರಿ ಸರ್ಕಲ್ನಲ್ಲಿ ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಈ ಬಗ್ಗೆ ಮುಂದಿನ ಕೌನ್ಸಿಲ್ ಮೀಟಿಂಗ್ನಲ್ಲಿ ಚರ್ಚಿಸಿ, ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ. ಪುತ್ಥಳಿ ನಿರ್ಮಿಸುವುದು ಅಷ್ಟು ಸಮಂಜಸವಲ್ಲ. ಮುಂದಿನ ದಿನಗಳಲ್ಲಿ ಸಾವರ್ಕರ್ ಪ್ರತಿಮೆಗೆ ಅವಮಾನವಾದರೆ ಕಷ್ಟ. ಪುತ್ಥಳಿ ಬದಲಿಗೆ ಸಾವರ್ಕರ್ ಸರ್ಕಲ್ ನಿರ್ಮಿಸಲು ನಗರಸಭೆಗೆ ಪತ್ರ ಬರೆದಿದ್ದೇನೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಹಿಂದೂ ಮುಖಂಡ ಯಶಪಾಲ ಸುವರ್ಣ ಪುತ್ಥಳಿ ಸ್ಥಾಪಿಸುವುದಾಗಿ ಹೇಳಿದ್ದರು. ಈ ಬಗ್ಗೆ ಉಡುಪಿ ನಗರಸಭೆಗೆ ಮನವಿ ಸಹ ಮಾಡಿದ್ದರು. ಬ್ಯಾನರ್ ಅಳವಡಿಸಿದ್ದ ಸ್ಥಳದಲ್ಲಿ ಪುತ್ಥಳಿ ನಿರ್ಮಿಸುವುದಾಗಿ ಘೋಷಿಸಿದ್ದರು. ಹಿಂದೂ ಮಹಾಸಭಾ, ಹಿಂದೂ ಜಾಗರಣ ವೇದಿಕೆ ಕೂಡ ನಗರಸಭೆಗೆ ಮನವಿ ಮಾಡಿತ್ತು. ಇದೀಗ ಉಡುಪಿ ನಗರಸಭೆ ಮೇಲೆ ಈ ವಿಚಾರದ ಬಗ್ಗೆ ಒತ್ತಡ ಹೆಚ್ಚಾಗುತ್ತಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಗೋಡ್ಸೆ, ಸಾವರ್ಕರ್ ಬ್ಯಾನರ್ ತೆರವು