ಉಡುಪಿ: ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಶಿರಾದಲ್ಲಿ ಬಿಜೆಪಿಗೆ ಅಭ್ಯರ್ಥಿಯೇ ಇರಲಿಲ್ಲ. ಕಾಂಗ್ರೆಸ್ನಿಂದ ಅರ್ಜಿ ಸಲ್ಲಿಸಿದವರನ್ನು ಕರೆದುಕೊಂಡು ಹೋಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ.
ಶಿರಾ ಉಪ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಶರಶಯ್ಯೆಯಲ್ಲಿ ಮಲಗಿಸಿದ್ದಾರೆ. ಬಿಎಸ್ವೈ ಅವರು ಭೀಷ್ಮಾಚಾರ್ಯ ಅವರಂತಾಗಿದ್ದಾರೆ. ಚುನಾವಣೆ ಮುಗಿದ ಬಳಿಕ ಅವರು ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.