ETV Bharat / state

ಉಡುಪಿ: ಬ್ಯಾಂಕ್ ಲೀಗಲ್ ಆಫೀಸರ್ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ! - Mobile blast kills Karnataka Bank employee

ಉಡುಪಿ ಕೃಷ್ಣಮಠ ಸಮೀಪದ ವಾದಿರಾಜ ರಸ್ತೆಯ ಮನೆಯೊಂದರಲ್ಲಿ ಸುಟ್ಟು ಹೋದ ಸ್ಥಿತಿಯಲ್ಲಿ ಬ್ಯಾಂಕ್‌ ಲೀಗಲ್ ಆಫೀಸರ್ ಒಬ್ಬರ ಮೃತದೇಹ ಪತ್ತೆಯಾಗಿದೆ.

Karnataka Bank Legal Officer Raj Gopal Samaga
ಕರ್ನಾಟಕ ಬ್ಯಾಂಕ್ ಲೀಗಲ್ ಆಫೀಸರ್ ರಾಜ್ ಗೋಪಾಲ್ ಸಾಮಗ
author img

By

Published : Nov 15, 2022, 11:51 AM IST

ಉಡುಪಿ: ಕರ್ನಾಟಕ ಬ್ಯಾಂಕ್‌ನ ಲೀಗಲ್ ಆಫೀಸರ್ ಒಬ್ಬರ ಮೃತದೇಹವು ಅವರ ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಜ್ ಗೋಪಾಲ್ ಸಾಮಗ (42) ಮೃತಪಟ್ಟವರೆಂದು ತಿಳಿದುಬಂದಿದೆ.

ಕೃಷ್ಣಮಠ ಸಮೀಪದ ವಾದಿರಾಜ ರಸ್ತೆಯಲ್ಲಿರುವ ಕೃಷ್ಣ ಸಾಮಗ ಅವರ ಮನೆಯಲ್ಲಿ ದಟ್ಟ ಹೊಗೆ ಕಂಡು ನೆರೆ ಮನೆಯವರು ವಿಷಯ ತಿಳಿಸಿದ್ದಾರೆ. ತಕ್ಷಣ ಎಚ್ಚೆತ್ತ ಮನೆಯವರು ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದರು. ಅಗ್ನಿಶಾಮಕ ದಳ ಹಾಗೂ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ನೋಡಿದಾಗ ಕೋಣೆಯ ಬಾಗಿಲು ಒಳಗಡೆಯಿಂದ ಲಾಕ್ ಆಗಿತ್ತು. ಈ ಸಂದರ್ಭದಲ್ಲಿ ಬಾಗಿಲು ಒಡೆದು ಪರಿಶೀಲಿಸಿದ್ದು ರಾಜ್ ಗೋಪಾಲ್ ಸಾಮಗ ಮೃತದೇಹ ಸುಟ್ಟ ಸ್ಥಿತಿಯಲ್ಲಿತ್ತು.

ಇವರು ಕೋಣೆಯಲ್ಲಿ ಲ್ಯಾಪ್‌ಟಾಪ್ ಹಾಗೂ ಮೊಬೈಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಇದೆ. ಮೊಬೈಲ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಹೈದರಾಬಾದ್‌ನ ಬ್ಯಾಂಕ್‌ ಶಾಖೆಯಲ್ಲಿ ಕರ್ತವ್ಯದಲ್ಲಿದ್ದ ಗೋಪಾಲ್ ಅವರು ಒಂದು ತಿಂಗಳ ಹಿಂದೆ ಮಂಗಳೂರಿಗೆ ವರ್ಗಾವಣೆ ಆಗಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಇದನ್ನೂ ಓದಿ:ಮೊರ್ಬಿ ಬಳಿಕ ಮತ್ತೊಂದು ದುರಂತ.. ಕಾಲುವೆಗೆ ಬಿದ್ದು ಒಂದೇ ಕುಟುಂಬದ ಐವರ ದುರ್ಮರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.