ಉಡುಪಿ: ಜಿಲ್ಲೆಯಲ್ಲಿ ಏರ್ಪಡಿಸಲಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 64ನೇ ದಮ್ಮ ಚಕ್ರ ಪ್ರವರ್ತನಾ ದಿನಾಚರಣೆಯಲ್ಲಿ ಜಿಲ್ಲೆಯ ಸುಮಾರು 50ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.
![more than 50 dalith convert to buddhism](https://etvbharatimages.akamaized.net/etvbharat/prod-images/kn-udp-01-20-bouda-matantara-7202200jpg_20102020073451_2010f_1603159491_747.jpg)
ಮೈಸೂರು ಕೊಳ್ಳೆಗಾಲ ಜೀವನ ಬುದ್ಧ ವಿಹಾರದ ಸುಗತಪಾಲ ಭಂತೇಜಿ ಮತಾಂತರಗೊಂಡ ಬೌದ್ಧರಿಗೆ ಪ್ರಮಾಣವಚನ ಬೋಧಿಸಿದರು. ಬೌದ್ಧ ಧರ್ಮಕ್ಕೆ ಮತಾಂತರಗೊಂಡವರು ಎಲ್ಲರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ಪದವಿ ಪೂರ್ವ ಮತ್ತು ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.