ETV Bharat / state

ವರಾಹಿ ಡ್ಯಾಂನಿಂದ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ನೀರು ಪೂರೈಸಲಾಗುವುದು: ಬಿ.ವೈ.ರಾಘವೇಂದ್ರ

author img

By

Published : Nov 25, 2020, 3:44 PM IST

ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಕುಡಿಯುವ ನೀರಿನ ಯೋಜನೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಸಭೆ ಹೆಮ್ಮಾಡಿಯಲ್ಲಿ ನಡೆಯಿತು.

MP  Raghavendra
ಬಿ.ವೈ. ರಾಘವೇಂದ್ರ

ಉಡುಪಿ: ವರಾಹಿ ಡ್ಯಾಂ ಮತ್ತು ಗುಲ್ವಾಡಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ನೀರು ಪೂರೈಸಲಾಗುವುದು. ವಿಧಾನಸಭಾ ಕ್ಷೇತ್ರದಲ್ಲಿ 220 ಟ್ಯಾಂಕ್ ನಿರ್ಮಾಣ ಕೆಲಸವನ್ನು 2 ವರ್ಷದಲ್ಲಿ ಪೂರ್ಣ ಮಾಡುತ್ತೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಭರವಸೆ ನೀಡಿದ್ದಾರೆ.

ಬಿ.ವೈ.ರಾಘವೇಂದ್ರ, ಸಂಸದ

ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಕುಡಿಯುವ ನೀರಿನ ಯೋಜನೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಸಭೆ ಹೆಮ್ಮಾಡಿಯಲ್ಲಿ ನಡೆಯಿತು. 550 ಕೋಟಿ ರೂಪಾಯಿ ವೆಚ್ಚದಲ್ಲಿ 2 ಕ್ಲಸ್ಟರ್ ಮಾಡಲಾಗಿದ್ದು, ಆರಂಭದಲ್ಲಿ 60 ಸಾವಿರ ಮನೆಗಳಿಗೆ ಕುಡಿಯುವ ನೀರು ತಲುಪಿಸುವ ಯೋಜನೆ ಇದಾಗಿದೆ. ಭವಿಷ್ಯದ ದೃಷ್ಟಿಯಿಂದ 71 ಸಾವಿರ ಮನೆಗಳಿಗೆ ನೀರು ಒದಗಿಸುವ ಯೋಜನೆ ಇದಾಗಿದೆ. ಈ ಕುರಿತು ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಸುಕುಮಾರ ಶೆಟ್ಟಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ಶಾಸಕ ಸುಕುಮಾರ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಐದು ನದಿಗಳು ಹರಿದು ಸಮುದ್ರ ಸೇರಿದರೂ ಬೇಸಿಗೆಯಲ್ಲಿ ಟ್ಯಾಂಕರ್ ನೀರು ಕುಡಿಯುವ ಸ್ಥಿತಿ ಇದೆ. ಆದ್ಯತೆ ಮೇರೆಗೆ ಬೈಂದೂರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಯೋಜನೆ ರೂಪಿಸಿ ಹಣ ಬಿಡುಗಡೆ ಮಾಡಿದೆ. ತಾಲೂಕಿನಲ್ಲಿ ಉಪ್ಪು ನೀರಿಗೆ ತಡೆಯೊಡ್ಡುವ ಉದ್ದೇಶದಿಂದ ಅಲ್ಲಲ್ಲಿ 110 ಕೋಟಿ ವೆಚ್ಚದಲ್ಲಿ ವೆಂಟೆಂಡ್ ಡ್ಯಾಂ ನಿರ್ಮಿಸುತ್ತೇವೆ ಎಂದು ಹೇಳಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.