ETV Bharat / state

ಇಷ್ಟೊಂದು ಕೆಳಮಟ್ಟಕ್ಕೆ ಇಳಿತಾರೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ: ಬಿಎಸ್​​ವೈ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುರುಘಾಶ್ರೀಗಳ ಬಗ್ಗೆ ಮಾತನಾಡಿದ್ದು, ಅವರು ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದು ಹೇಳಿದ್ದಾರೆ.

Muruga Shri
ಬಿಎಸ್​​ವೈ
author img

By

Published : Nov 8, 2022, 1:49 PM IST

Updated : Nov 8, 2022, 1:57 PM IST

ಉಡುಪಿ: ಮುರುಘಾ ಶ್ರೀಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ನಾನು ಮತ್ತು ಮುಖ್ಯಮಂತ್ರಿಗಳು ಕರಾವಳಿ ಭಾಗದಲ್ಲಿ ಪ್ರವಾಸ ಮಾಡಿದ್ದೇವೆ. ನಮಗೆ ಹಿಂದೆಂದೂ ಇಲ್ಲದ ಸ್ವಾಗತ ಸಿಕ್ಕಿದೆ. ಕರಾವಳಿ ಭಾಗದಲ್ಲಿ ನೂರಕ್ಕೆ ನೂರು ನಮ್ಮ ಎಲ್ಲಾ ಅಭ್ಯರ್ಥಿಗಳು ಗೆಲ್ಲುತ್ತಾರೆ. ರಾಜ್ಯದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂದೂ ಅಶ್ಲೀಲ ಪದ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಹಿಂದೂಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ಖಂಡನೀಯ. ಕಾಂಗ್ರೆಸ್​ನವರು ಇದನ್ನು ಖಂಡಿಸಿದ್ದಾರೆ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು. ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು. ಹಿಂದೂಗಳಿಗೆ ಅಪಮಾನ ಆಗುವ ಹಾಗೆ ವರ್ತನೆ ಮಾಡಬಾರದು ಎಂದು ಬಿಎಸ್​ವೈ ಸಲಹೆ ನೀಡಿದರು.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ಚುನಾವಣೆಯಲ್ಲಿ ಗೆದ್ದು ಖರ್ಗೆಗೆ ಗಿಫ್ಟ್ ಕೊಡುತ್ತೇವೆ ಎಂದಿರುವ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಬಿ ಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಯಾವುದೋ ಭ್ರಮೆಯಲ್ಲಿದ್ದಾರೆ. ರಾಜ್ಯದ ಜನ ಅವರ ಜೇಬಿನಲ್ಲಿದ್ದಾರೆ ಎಂಬ ಭಾವನೆ ಮನಸ್ಸಲ್ಲಿದ್ದಂತಿದೆ ಎಂದರು.

ಇದನ್ನೂ ಓದಿ: ನನ್ನ ಹೇಳಿಕೆ ತಪ್ಪು ಅಂತಾ ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆಗೆ ಸಿದ್ಧ: ಬಿಜೆಪಿಗೆ ಸತೀಶ್ ಜಾರಕಿಹೊಳಿ ಸವಾಲು

ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವುದು ಅಸಾಧ್ಯ. ನಾನು ಮತ್ತು ಬೊಮ್ಮಾಯಿ ರಾಜ್ಯದಲ್ಲಿ ಪ್ರವಾಸ ಹೊರಟಾಗ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ. ಮೋದಿ ಅವರ ಬೆಂಬಲದೊಂದಿಗೆ ಬಿಜೆಪಿಗೆ ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಸಿಗಲಿದೆ. ಕರ್ನಾಟಕದಲ್ಲಿ ಬಿಜೆಪಿಯ ಗೆಲುವನ್ನು ತಡೆಯಲು ಸಿದ್ದರಾಮಯ್ಯರಿಂದ ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಹೇಳಿದರು.

Last Updated : Nov 8, 2022, 1:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.