ಉಡುಪಿ: ಪ್ರವೀಣ್ ನೆಟ್ಟಾರು ಮನೆಗೆ ನಾನು ಹೊರಟಿದ್ದೆ ಹೆಜಮಾಡಿಯಲ್ಲಿ ನನ್ನನ್ನ ಪೊಲೀಸರು ತಡೆದಿದ್ದಾರೆ. ದಕ್ಷಿಣ ಕನ್ನಡ ಡಿಸಿ ಕೊಟ್ಟ ನಿಷೇದಾಜ್ಞೆ ಪತ್ರವನ್ನು ಕೈಗೆ ಕೊಟ್ಟಿದ್ದಾರೆ. ನೀವು ಮುತಾಲಿಕ ಬ್ಯಾನ್ ಮಾಡುತ್ತಿಲ್ಲ ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ. ಹಿಂದೂ ವಿರೋಧಿ ಕಾಂಗ್ರೆಸ್ ಬ್ಯಾನ್ ಮಾಡಿದ್ದರೆ ಒಪ್ಪಬಹುದಿತ್ತು.
ಬಿಜೆಪಿಯವರು ಹಿಂದೂ ವಿರೋಧಿಗಳಿದ್ದಾರೆ ನೀಚ ನಿರ್ಲಜ್ಜರಿದ್ದಾರೆ. ನೂರಾರು ಜನ ರಾಜೀನಾಮೆ ಕೊಟ್ಟು ನಿಮ್ಮ ಮುಖಕ್ಕೆ ಉಗಿದಿದ್ದಾರೆ. ನಾನು ಯಾವುದೇ ಸಮಾವೇಶ ಸಭೆಗೆ ಹೋಗುತ್ತಿಲ್ಲ ಸಾಂತ್ವನ ಹೇಳಲು ಹೋಗುತ್ತಿದ್ದೇನೆ ಅಂತಾ ಉಡುಪಿಯ ಪಡುಬಿದ್ರೆಯಲ್ಲಿ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ.
ಪರ್ಯಾಯ ಹಿಂದೂ ಪಕ್ಷ ಹುಟ್ಟುಹಾಕಲು ನೀವೇ ಕಾರಣರಾಗುತ್ತೀರಿ. ಹಿಂದೂ ರಾಷ್ಟ್ರಕ್ಕಾಗಿ ಹಿಂದುತ್ವಕ್ಕಾಗಿ ಎಂದು ಕಾರ್ಯಕರ್ತರು ಚುನಾವಣೆಗೆ ನಿಲ್ಲುತ್ತಾರೆ. ಚುನಾವಣೆಯಲ್ಲಿ ಬಿಜೆಪಿಯನ್ನು ಧಿಕ್ಕರಿಸುತ್ತಾರೆ ನೋಡುತ್ತಿರಿ. ಹಿಂದುತ್ವ ವಿಚಾರದಲ್ಲಿ ನಾನು ಒಂದಿಂಚು ಕಾಂಪ್ರಮೈಸ್ ಆಗುವವನಲ್ಲ. ಬೆಳ್ಳಾರೆಗೆ ಹೋಗಲು ಎಲ್ಲರಿಗೂ ಅವಕಾಶವಿದೆ ನನಗೆ ಯಾಕಿಲ್ಲ ಎಂದು ಉಡುಪಿಯ ಪಡುಬಿದ್ರೆಯಲ್ಲಿ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಅಪರಾಧಗಳ ಹೆಚ್ಚಳ ಪೋಲಿಸರಿಂದ ಬಿಗು ತಪಾಸಣೆ : ಕರಾವಳಿ ಜಿಲ್ಲೆಗಳಲ್ಲಿ ಸರಣಿ ಅಪರಾಧ ಕೃತ್ಯಗಳ ಹಿನ್ನೆಲೆ ಉಡುಪಿಯಲ್ಲೂ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ಸೇರಿದಂತೆ ಜಿಲ್ಲಾದ್ಯಂತ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಸುಮಾರು 11 ಕಡೆಗಳಲ್ಲಿ ಚೆಕ್ ಪೋಸ್ಟ್ಗಳನ್ನು ಮಾಡಿರುವ ಜಿಲ್ಲಾ ಪೊಲೀಸ್ ಹೊರ ರಾಜ್ಯ, ಹೊರ ಜಿಲ್ಲೆಯ ನೋಂದಣಿ ಹೊಂದಿರುವ ವಾಹನಗಳ ತಪಸಣೆ ಮಾಡುತ್ತಿದ್ದಾರೆ.
ಸಂಶಯಾಸ್ಪದ ವಾಹನಗಳನ್ನು ತಪಾಸಿಸುತ್ತಿರುವ ಪೋಲಿಸರು: ಪ್ರಮುಖ ಜಂಕ್ಷನ್, ಸೂಕ್ಷ್ಮ ಪ್ರದೇಶಗಳಲ್ಲಿ ಬಿಗು ಚೆಕ್ಕಿಂಗ್ ನಡೆಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಉಡುಪಿಯ ಉದ್ಯಾವರದ ಬಲಾಯಿಪಾದೆ, ಅಂಬಾಗಿಲು, ನೇಜಾರು ಭಾಗಗಳಲ್ಲಿ ಪೋಲಿಸರಿಂದ ಬಿಗಿ ತಪಾಸಣೆ ನಡೀತಾ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೋಲಿಸರು ತಪಾಸಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಪ್ರವೀಣ್ ಕುಟುಂಬಕ್ಕೆ ನೆರವು ನೀಡಲು ಬಿಜೆಪಿ ಹೆಸರಲ್ಲಿ ಹಣ ಸಂಗ್ರಹ ಮಾಡುತ್ತಿಲ್ಲ, ಎಚ್ಚರ ವಹಿಸಿ: ನಿರ್ಮಲ್ ಕುಮಾರ್ ಸುರಾನಾ