ಉಡುಪಿ: ಕಾಪು ಪೊಲೀಸ್ ಠಾಣೆಯ ಎಎಸ್ಐ ಸೇರಿ ಜಿಲ್ಲೆಯಲ್ಲಿಂದು 90 ಜನರ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,567ಕ್ಕೆ ಏರಿಕೆಯಾಗಿದೆ.
ಎಎಸ್ಐಗೆ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆ ಠಾಣೆಯನ್ನು ಸಂಪೂರ್ಣವಾಗಿ ಸೀಲ್ಡೌನ್ ಮಾಡಲಾಗಿದೆ. ತಾತ್ಕಾಲಿಕವಾಗಿ ಠಾಣೆಯನ್ನು ವೀರಭದ್ರ ದೇವಸ್ಥಾನಕ್ಕೆ ಸ್ಥಳಾಂತರ ಮಾಡಲಾಗಿದೆ. ಮುಂದಿನ 48 ಗಂಟೆಗಳ ಕಾಲ ಠಾಣೆ ಸೀಲ್ಡೌನ್ ಆಗಿರಲಿದ್ದು, ಸ್ಯಾನಿಟೈಸ್ ಮಾಡುವ ಪ್ರಕ್ರಿಯೆ ನಡೆಯಲಿದೆ. ಅಲ್ಲದೆ ಎಸ್ಐ ಕೋಟದಿಂದ ಬಸ್ ಮೂಲಕ ಪ್ರತಿದಿನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಜಿಲ್ಲೆಯಲ್ಲಿ ಇಂದು 21 ಕೋವಿಡ್ ಸೋಂಕಿತರು ಗುಣಮುಖರಾಗಿದ್ದು, 319 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.