ಉಡುಪಿ: ಕಾರ್ಪೊರೇಟ್ ಜಗತ್ತಿನ ಪ್ರಭಾವಿ ಮಹಿಳೆ ಹಾಗೂ ಪೇಜಾವರ ಸ್ವಾಮೀಜಿ ಅವರ ಶಿಷ್ಯೆ ನೀರಾ ರಾಡಿಯಾ ಅವರು ಶುಕ್ರವಾರ ರಾತ್ರಿ ಮತ್ತು ಇಂದು ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದರು.
ವೈದ್ಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ. ನಿನ್ನೆಗಿಂತ ಇಂದು ಮತ್ತಷ್ಟು ಚೇತರಿಸಿಕೊಂಡಿದ್ದಾರೆ. ಹಾಗೂ ಉತ್ತಮ ಚಿಕಿತ್ಸೆ ದೊರೆಯುತ್ತಿದೆ ಎಂದರು.