ಉಡುಪಿ: ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದೆ. ಎಂದಿನಂತೆ ಅಟೋಗಳು ಸಂಚರಿಸುತ್ತಿದ್ದು, ಪೊಲೀಸರು ನಗರದಾದ್ಯಂತ ಗಸ್ತು ತಿರುಗುತ್ತಿದ್ದಾರೆ. ಬಸ್ ನಿಲ್ದಾಣ ಸಮೀಪದ ಹೋಟೆಲ್, ಅಂಗಡಿಗಳು ತೆರೆದಿವೆ. ಜಿಲ್ಲೆಯಲ್ಲಿ ಬಂದ್ಗೆ ಮನವಿ ಮಾಡಿದ 14 ಸಂಘಟನೆಗಳಿಗೆ ಯಾವುದೇ ಬೆಂಬಲ ಸಿಕ್ಕಿಲ್ಲ.
ರಸ್ತೆ ತಡೆಗೆ ಮುಂದಾದ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಬಸ್ಸು ಓಡಿಸಿದಂತೆ ರಸ್ತೆ ಅಡ್ಡಗಟ್ಟಿದ 100ಕ್ಕೂ ಹೆಚ್ಚು ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.