ಉಡುಪಿ: ಹಂದಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಣ್ಣೆಕುದ್ರುದಲ್ಲಿ ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು ಪತ್ತೆಯಾದ ಬಳಿಕ ಸ್ಥಳ ಪರಿಶೀಲನೆ ಮಾಡಿ ಸೀಲ್ ಡೌನ್ ಮಾಡಲಾಗಿದೆ.
ಮಹಾಮಾರಿ ಕೊರೊನಾ ಕಂಡು ಬಂದ ಹಿನ್ನೆಲೆ, ಬ್ರಹ್ಮಾವರ ತಹಶೀಲ್ದಾರ್ ಸೇರಿದಂತೆ ಇತರೆ ಅಧಿಕಾರಿಗಳು ಆಗಮಿಸಿ ಗ್ರಾಮದ ಸೋಂಕಿತ ಪ್ರದೇಶವನ್ನು ಸೀಲ್ ಡೌನ್ ಮಾಡಿದ್ದಾರೆ.