ಉಡುಪಿ: ಉಡುಪಿ ನಿರ್ಮಿತಿ ಕೇಂದ್ರದಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ರೂ ದೇಣಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಹೋಮ್ ಕ್ವಾರಂಟೈನ್ ಉಲ್ಲಂಘಿಸಿ ಸುತ್ತಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಸಿದ್ದಾರೆ. ಈ ತನಕ ಹೋಮ್ ಕ್ವಾರಂಟೈನ್ (ಪ್ರತ್ಯೇಕವಾಗಿರುವುದು) ಉಲ್ಲಂಘಿಸಿದ 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಇತರರಿಗೂ ತೊಂದರೆ ಕೊಟ್ಟರೆ ಚಿಕಿತ್ಸೆಯ ಪೂರ್ತಿ ವೆಚ್ಚವನ್ನು ಅವರಿಂದಲೇ ಭರಿಸುತ್ತೇವೆ ಎಂದು ಖಡಕ್ ಆಗಿ ಹೇಳಿದ್ದಾರೆ.
ತೋಟಗಾರಿಕೆ ಬೆಳೆಗಳ ಮಾರಾಟಕ್ಕೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ತೊಂದರೆಯಾದರೂ ರೈತರು ಜಿಲ್ಲಾಡಳಿತವನ್ನು ಸಂಪರ್ಕಿಸಬಹುದು. ಅಗತ್ಯ ಬಿದ್ದರೆ ತೋಟಗಾರಿಕಾ ಬೆಳೆಗಳನ್ನು ಸೂಕ್ತ ಬೆಲೆಗೆ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗುವುದು.
ಮೀನುಗಾರಿಕೆಗೂ ಯಾವುದೇ ನಿಷೇಧ ಹೇರಿಲ್ಲ. ಐದು ಜನರು ಒಟ್ಟುಗೂಡಿ ಮೀನು ಹಿಡಿಯಬಹುದು. ಮಾರಾಟ ಮಾಡುವಾಗಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
ಮೀನು, ಮಟನ್, ಕೋಳಿ ವ್ಯಾಪಾರಕ್ಕೆ ಜಿಲ್ಲೆಯಲ್ಲಿ ಯಾವುದೇ ನಿರ್ಬಂಧ ಇಲ್ಲ ಡಿಸಿ ವಿವರಣೆ ಕೊಟ್ಟರು.