ಉಡುಪಿ: ವಿಂಗ್ ಕಮಾಂಡರ್ ಅಭಿನಂದನ್ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಶ್ರೀ ಕೃಷ್ಣ ಮಠದಲ್ಲಿ ಅವರಿಗೆ ಗೌರವಾರ್ಪಣೆ ಮಾಡಬೇಕು. ಆದುದರಿಂದ ಅಬಿನಂದನ್ ಅವರನ್ನು ಕೂಡಲೇ ಉಡುಪಿಗೆ ಕಳುಹಿಸಿಕೊಡಿ ಎಂದು ಕೇಂದ್ರ ರಕ್ಷಣಾ ಸಚಿವೆ ಬಳಿ ಪಾಲಿಮಾರು ಮಠದ ಶ್ರೀಗಳು ಬೇಡಿಕೆ ಇಟ್ಟಿದ್ದಾರೆ.
ಇಂದು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಮನವಿ ಮಾಡಿದ ಪಾಲಿಮಾರು ಮಠದ ಶ್ರೀ ವಿದ್ಯಾದೀಶ ತೀರ್ಥ ಸ್ವಾಮೀಜಿ, ಇಲಾಖೆ ಮೂಲಕ ಅವರು ಬರುವಂತೆ ಅವಕಾಶ ಕೊಡಿ ಎಂದು ಬೇಡಿಕೆ ಇಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಕಾನೂನಾತ್ಮಕ ಅಡೆತಡೆ ಇಲ್ಲದಿದ್ದರೆ ಕಳುಹಿಸಿಕೊಡುತ್ತೇವೆ. ರಕ್ಷಣಾ ಇಲಾಖೆಗೆ ಒಂದು ಪತ್ರ ಬರೆಯಿರಿ ಎಂದರು.
ಇದಕ್ಕೂ ಮುನ್ನ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.