ETV Bharat / state

ಗೋಶಾಲೆಗಳಿಗೆ 200 ಕೋಟಿ ರೂ. ಪ್ಯಾಕೇಜ್‌ಗೆ ಒತ್ತಾಯ: ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ - ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ

ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಠ 200 ಕೋಟಿ ರೂ. ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ( ರಿ) ಅಧ್ಯಕ್ಷ ಪೇಜಾವರದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿ​ಗೆ ಪತ್ರ ಬರೆದಿದ್ದಾರೆ.

Pejavara shree urges center to sanction 200 crore
ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ
author img

By

Published : Aug 16, 2020, 3:36 PM IST

ಉಡುಪಿ: ಕೊರೊನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿವೆ. ಹಾಗಾಗಿ, ತುರ್ತಾಗಿ ಕನಿಷ್ಠ 200 ಕೋಟಿ ರೂ. ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ (ರಿ) ಅಧ್ಯಕ್ಷ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ಗೆ ಪತ್ರ ಬರೆದಿದ್ದಾರೆ.

Pejavara shree urges center to sanction 200 crore
ಶ್ರೀಗಳು ಬರೆದ ಪತ್ರ

ಕಳೆದ ಆರೇಳು ತಿಂಗಳುಗಳಿಂದ ಕೊರೊನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳೂ ತೊಂದರೆಗೊಳಗಾಗಿವೆ. ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ. ಉಡುಪಿಯಲ್ಲಿ ನೀಲಾವರ, ಕೊಡವೂರು, ಹೆಬ್ರಿಯಲ್ಲಿ ನಾವು ನಡೆಸುತ್ತಿರುವ ಗೋಶಾಲೆಗಳಿಗೆ ಮಾಸಿಕ ಅಂದಾಜು 35 ಲಕ್ಷ ರೂ ನಿರ್ವಹಣಾ ವೆಚ್ಚ ಇದೆ. ಅದೇ ರೀತಿಯಲ್ಲಿ ಇದಕ್ಕೆ ದೊಡ್ಡ ಅಥವಾ ಸಣ್ಣ ಮಟ್ಟದ ಗೋಶಾಲೆಗಳನ್ನು ಅನೇಕ ಮಠ ಹಾಗೂ ಮಹನೀಯರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕರ್ತವ್ಯದ ದೃಷ್ಟಿಯಿಂದ ನಡೆಸುತ್ತಾ, ಲಕ್ಷಾಂತರ ಗೋವುಗಳನ್ನು ಪೋಷಿಸುತ್ತಿದ್ದಾರೆ. ಧರ್ಮಾಭಿಮಾನಿಗಳ ಸಹಕಾರದಿಂದ ಇದು ಸಾಧ್ಯವಾಗುತ್ತಿತ್ತು.

ಪ್ರಸ್ತುತ ಭಕ್ತರ ದೇಣಿಗೆಯೂ ಅಷ್ಟಾಗಿ ಬರುತ್ತಿಲ್ಲ. ಮೇಲಾಗಿ 2 ತಿಂಗಳಿನಿಂದ ದೇಶದ ಕೆಲವೆಡೆಗಳಲ್ಲಿ ವಿಪರೀತ ಮಳೆಯೂ ಸುರಿಯುತ್ತಿರುವುದರಿಂದ ಮೇವಿನ ಸಂಗ್ರಹಣೆಯೂ ದುಸ್ತರವಾಗುತ್ತಿದೆ. ಆದ್ದರಿಂದ ಕೊರೊನಾ ವಿಪತ್ತನ್ನು ಎದುರಿಸಲು ಬೇರೆ ಬೇರೆ ಕ್ಷೇತ್ರಗಳಿಗೆ ಸರ್ಕಾರವು ಆರ್ಥಿಕ ಪ್ಯಾಕೇಜ್ ಘೋಷಿಸಿದಂತೆ ಗೋಶಾಲೆಗಳಿಗೂ ಕನಿಷ್ಠ 200 ಕೋಟಿಯಾದರೂ ತುರ್ತಾಗಿ ನೀಡಿ ಗೋರಕ್ಷಣೆಯ ಕೈಂಕರ್ಯದಲ್ಲಿ ಕೈಜೋಡಿಸಬೇಕು. ಕೇವಲ ಧರ್ಮ‌ಮಾತ್ರವಲ್ಲದೇ ಆರ್ಥಿಕತೆಯ ಹಿತದೃಷ್ಟಿಯಿಂದಲೂ ಗೋರಕ್ಷಣೆಯನ್ನು ಆದ್ಯತೆಯಾಗಿ ಪರಿಗಣಿಸಬೇಕೆಂದು ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.