ETV Bharat / state

ರಾಮ ಸೇವಾ ಸಂಕಲ್ಪ ಅಭಿಯಾನ ಕೈಗೊಳ್ಳುವಂತೆ ಪ್ರಧಾನಿಗೆ ಪೇಜಾವರ ಶ್ರೀ ಸಲಹೆ - pejavara sri decides to built 6 house

ರಾಮಮಂದಿರ ನಿರ್ಮಾಣದ ಉದ್ದೇಶವೇನು?, ರಾಮರಾಜ್ಯ ಎಂದರೇನು ಎಂಬುದನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

vishwaprasanna theertha swamiji
ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
author img

By

Published : Jan 18, 2023, 9:48 AM IST

ಉಡುಪಿ ಪೇಜಾವರ ಮಠದಲ್ಲಿ ಮಾತನಾಡಿದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ: ರಾಮಮಂದಿರ ನಿರ್ಮಾಣದ ವೇಳೆ ರಾಮರಾಜ್ಯ ನಿರ್ಮಾಣದ ಸಂಕಲ್ಪ ಮಾಡೋಣ ಎಂದು ಪೇಜಾವರದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕರೆ ಕೊಟ್ಟರು. ಇದೇ ವೇಳೆ ಅವರು ರಾಷ್ಟ್ರಾದ್ಯಂತ ರಾಮ ಸೇವಾ ಸಂಕಲ್ಪ ಅಭಿಯಾನ ಕೈಗೊಳ್ಳುವಂತೆಯೂ ಪ್ರಧಾನಿ ಮೋದಿ ಅವರಿಗೆ ಸಲಹೆ ನೀಡಿದ್ದಾರೆ. ಸಮಾಜದ ದುರ್ಬಲರು, ಅಶಕ್ತರು, ಬಡವರಿಗೆ ಈ ಮೂಲಕ ಸಹಾಯ ಮಾಡೋಣ ಎಂದು ಶ್ರೀಗಳು ಹೇಳಿದ್ದಾರೆ.

ಮಠದ ಶ್ರೀರಾಮ ವಿಠಲ ಸಭಾಂಗಣದಲ್ಲಿ ಮಂಗಳವಾರ ಮಾತನಾಡಿದ ಅವರು, ದೇವಾಲಯದ ಹುಂಡಿಗೆ ಹಾಕುವ ಹಣ ಹೇಗೆ ವಿನಿಯೋಗ ಆಗುತ್ತದೋ ಗೊತ್ತಿಲ್ಲ. ಆದ್ರೆ, ರಾಮ ರಾಜ್ಯಕ್ಕೋಸ್ಕರ ರಾಮಮಂದಿರ ನಿರ್ಮಾಣ ಆಗುತ್ತಿದೆ. ಮಂದಿರ ಕಟ್ಟುವ ಜೊತೆಗೆ ಬಡವರಿಗೆ ಮನೆ ಕಟ್ಟಿಸಿ ಕೊಡುವ ಸಂಕಲ್ಪ ಮಾಡೋಣ ಎಂದರು.

ಅರ್ಹ ಬಡವರಿಗೆ ಮನೆ: ನನ್ನ 60ನೇ ವರ್ಷದ ಜನ್ಮದಿನಾಚರಣೆ ಪ್ರಯುಕ್ತ ಅರ್ಹ ಬಡವರಿಗೆ 6 ಮನೆಗಳನ್ನು ನಿರ್ಮಿಸಿ ಕೊಡಲು ಸಂಕಲ್ಪ ಮಾಡಿದ್ದೇನೆ. ಇದೇ ರೀತಿ ಎಲ್ಲರೂ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವದ ದಿನಾಚರಣೆಯಂದು ಒಂದೊಳ್ಳೆಯ ಕೆಲಸ ಮಾಡಬೇಕು. ಇದರಿಂದ ರಾಮ ದೇವರ ಹೆಸರಿನಲ್ಲಿ ಪರಿವರ್ತನೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಕಾರಿಂಜ ಕ್ಷೇತ್ರಕ್ಕೆ ಪೇಜಾವರ ಶ್ರೀ ಭೇಟಿ: ಗಣಿಗಾರಿಕೆ ಪರವಾನಗಿ ರದ್ದುಗೊಳಿಸಲು ಒತ್ತಾಯ

ದೇವಭಕ್ತಿ, ದೇಶಭಕ್ತಿ ಒಂದೇ: ಮಂದಿರದಿಂದ ದೇಶಕ್ಕೇನು ಲಾಭ ಅಂತ ಜನ ಕೇಳ್ತಾರೆ?. ಮಂದಿರದೊಂದಿಗೆ ದೇಶದ ಜನರಿಗೂ ಸಹಾಯ ಮಾಡೋಣ. ಪ್ರಧಾನಿ ಮೋದಿಯವರು ಒಂದು ದಿನವನ್ನು ಸಂಕಲ್ಪ ದಿನವೆಂದು ಘೋಷಿಸಬೇಕು. ದೇಶದ ಭಗವದ್ಭಕ್ತರು, ದೇಶ ಪ್ರೇಮಿಗಳು ಯೋಜನೆಗೆ ಕೈಜೋಡಿಸಬೇಕು. ಈ ಸೇವಾ ಕಾರ್ಯಕ್ಕೆ ಒಂದು ಆ್ಯಪ್ ಸಿದ್ಧ ಮಾಡಬೇಕು. ಪ್ರತಿ ಜಿಲ್ಲೆಯಲ್ಲಿ ಕೈಗೊಂಡ ಕೆಲಸ ದಾಖಲಾಗಬೇಕು. ಒಂದು ವರ್ಷದ ಉತ್ತಮ ಕಾರ್ಯಗಳನ್ನು ಶ್ರೀರಾಮ ದೇವರಿಗೆ ಅರ್ಪಿಸೋಣ.

ಮನೆ ನಿರ್ಮಾಣದೊಂದಿಗೆ ಗೋವು, ವಿದ್ಯಾರ್ಥಿಗಳು, ರೋಗಿಗಳ ದತ್ತು ಸ್ವೀಕಾರ ಮಾಡೋಣ. ದೇಶದ ಉದ್ದಗಲ ಜನರಲ್ಲಿ ಈ ಪರಿವರ್ತನೆ ಆಗಬೇಕು. ದೇಶಾದ್ಯಂತ ಸೇವಾ ಕಾರ್ಯ ಐಚ್ಛಿಕವಾಗದೆ ಕಡ್ಡಾಯ ಆಗಬೇಕು. ಜೀವನದಲ್ಲಿ ವೈಭವದ ಆಚರಣೆಯ ಜೊತೆ ಬಡವರ ಬಗ್ಗೆ ಕನಿಕರ ತೋರೋಣ. ದೇವಭಕ್ತಿ ಮತ್ತು ದೇಶಭಕ್ತಿ ಬೇರೆ ಬೇರೆಯಲ್ಲ. ಈ ಯೋಜನೆಯ ಕುರಿತು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಚರ್ಚಿಸುವುದಾಗಿ ಶ್ರೀಗಳು ತಿಳಿಸಿದರು.

ಇದನ್ನೂ ಓದಿ: ಪೂಜೆ ಮಾಡುವ ಅರ್ಚಕರ ವೇಷದಲ್ಲೂ ಜಿಹಾದಿ ಪ್ರವೃತ್ತಿ ಬರಬಹುದು : ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿ

ಒಂದೊಂದು ಸಂಘ ಸಂಸ್ಥೆಯು ಒಂದೊಂದು ಒಳ್ಳೆಯ ಕೆಲಸ ಮಾಡಿದರೆ ಸಮಾಜದಲ್ಲಿ ಬಹಳ ದೊಡ್ಡ ಕ್ರಾಂತಿ ಆಗುತ್ತದೆ. ಇದರಿಂದ ರಾಮ ರಾಜ್ಯದ ಕನಸು ನನಸಾಗಲು ಸಾಧ್ಯ. ಈ ಕಾರ್ಯ ಕೇವಲ ಉಡುಪಿ, ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರದೇ ದೇಶದ ಎಲ್ಲ ಕಡೆಗಳಲ್ಲಿ ನಡೆಯಬೇಕು. ಆ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳಿಗೆ ಸಂಕಲ್ಪ ದಿವಸ ಆಚರಿಸಲು ಮನವಿ ಮಾಡಲಾಗುವುದು ಎಂದರು.

ಇದನ್ನೂ ಓದಿ: ಸನಾತನ ಹಿಂದೂ ಧರ್ಮವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಾದ ಅವಶ್ಯಕತೆ ಇದೆ : ಶ್ರೀ ವಿಶ್ವಪ್ರಸನ್ನ ತೀರ್ಥರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.