ETV Bharat / state

ರಾಮ ಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ, ನೋಂದಣಿಯಾಗಿರುವ ಸಂಸ್ಥೆ : ಪೇಜಾವರ ಶ್ರೀ - ರಾಮ ಮಂದಿರ ದೇಣಿಗೆ ಸಂಗ್ರಹದ ಕುರಿತು ಹೆಚ್​ಡಿಕೆ ಆರೋಪ

ಯಾವುದೇ ಸಂಶಯಗಳನ್ನು ಇಟ್ಟು ಆರೋಪ ಮಾಡುವುದು ಸೂಕ್ತವಲ್ಲ. ರಾಮ ಜನ್ಮಭೂಮಿ ಟ್ರಸ್ಟ್​​ನಂತೆ ಅಧಿಕೃತವಾಗಿರುವ ವಿಶ್ವ ಹಿಂದೂ ಪರಿಷತ್​ನ ಕಾರ್ಯಕರ್ತರು ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ ಎಂದು ಪೇಜಾವರ ಶ್ರೀ ಹೇಳಿದ್ದಾರೆ.

Pejavara Swamiji reaction about HDK Statement
ಕುಮಾರಸ್ವಾಮಿ ಹೇಳಿಕೆಗೆ ಪೇಜಾವರ ಶ್ರೀ ಪ್ರತಿಕ್ರಿಯೆ
author img

By

Published : Feb 17, 2021, 6:11 PM IST

Updated : Feb 17, 2021, 7:08 PM IST

ಉಡುಪಿ : ರಾಮ ಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ, ಅದೊಂದು ನೋಂದಣಿಯಾಗಿರುವ ಸಂಸ್ಥೆ. ನೋಂದಣಿಗೆ ಅದರದ್ದೇ ಆದ ನೀತಿ ನಿಯಮಾವಳಿಗಳಿವೆ. ದೇಣಿಗೆ ಸಂಗ್ರಹ ಮಾಡಲು ಕಾನೂನು ಇದೆ. ನಮಗೆ ಸಂವಿಧಾನವೇ ಅಧಿಕಾರ ಕೊಟ್ಟಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ.

ರಾಮ ಮಂದಿರ ದೇಣಿಗೆ ಸಂಗ್ರಹ ವಿಷಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಆಡಿಟ್ ಆಗಿ ಅದಕ್ಕೆ ಬೇಕಾಗಿರುವಂತ ಪುರಾವೆಗಳನ್ನು ಕೊಡಲು ಸಾಧ್ಯವಿದೆ. ಹಾಗಾಗಿ, ಯಾವುದೇ ಸಂಶಯಗಳನ್ನು ಇಟ್ಟು ಆರೋಪ ಮಾಡುವುದು ಸೂಕ್ತವಲ್ಲ. ರಾಮ ಜನ್ಮಭೂಮಿ ಟ್ರಸ್ಟ್​​ನಂತೆ ಅಧಿಕೃತವಾಗಿರುವ ವಿಶ್ವ ಹಿಂದೂ ಪರಿಷತ್​ನ ಕಾರ್ಯಕರ್ತರು ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ ಎಂದರು.

ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

ವಿಹಿಂಪ ಕಾರ್ಯರ್ತರಿಗೆ ದೇಣಿಗೆ ಸಂಗ್ರಹದ ಜವಾಬ್ದಾರಿ ನೀಡಲಾಗಿದೆ. ಸಂಘಟನೆಯ ಹಿರಿಯ ಮುಂದಾಳುಗಳ‌ ನೇತೃತ್ವದಲ್ಲಿ ಕಾರ್ಯಕರ್ತರು ನಿಧಿ ಸಂಗ್ರಹ ಮಾಡುತ್ತಿದ್ದಾರೆ. ವಿಹಿಂಪ ಪುಂಡು ಪೋಕರಿಗಳ ಸಂಸ್ಥೆಯಲ್ಲ, ಇದು ಅಧಿಕೃತ ಸಂಸ್ಥೆ. ಹಾಗಾಗಿ, ಇಂತಹ ಮಾತು ಬಳಸುವುದು ಸರಿಯಲ್ಲ. ಸಂಶಯಕ್ಕೆ ಪರಿಹಾರ ಇದೆ. ಸಂಶಯ ಇದೆ ಎಂದು ಅರೋಪ ಮಾಡಿದರೆ, ಆರೋಪದಲ್ಲಿಯೇ ಮುಗಿಯುತ್ತದೆ. ಆರೋಪಕ್ಕೆ ಪ್ರತ್ಯಾರೋಪ ಸಿಗುತ್ತದೆ, ಪ್ರಶ್ನೆಗೆ ಉತ್ತರ ಸಿಗುವುದಿಲ್ಲ. ಪ್ರಶ್ನೆ ಮಾಡಿದರೆ, ಉತ್ತರ ಕೊಡಬಹುದು ಎಂದು ಪೇಜಾವರ ಶ್ರೀ ಹೇಳಿದರು.

Last Updated : Feb 17, 2021, 7:08 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.