ETV Bharat / state

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆಗೆ ಖಂಡನೆ: ಉಡುಪಿಯಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿಯಲ್ಲಿ ಜಿಲ್ಲಾ ನಾಗರಿಕ ವೇದಿಕೆಯಿಂದ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

author img

By

Published : Feb 25, 2021, 5:50 PM IST

ಉಡುಪಿಯಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ
ಉಡುಪಿಯಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

ಉಡುಪಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿಯಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ವೇದಿಕೆ ಈ ಪ್ರತಿಭಟನೆಯ ನೇತೃತ್ವ ವಹಿಸಿತ್ತು.

ಉಡುಪಿಯಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

ಜೋಡುಕಟ್ಟೆಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಉಡುಪಿಯ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಅಜ್ಜರಕಾಡು ಹುತಾತ್ಮ ವೇದಿಕೆ ಬಳಿ ಪ್ರತಿಭಟನಾ ಮೆರವಣಿಗೆ ಸಮಾಪನಗೊಂಡಿತು. ತಳ್ಳುಗಾಡಿಯಲ್ಲಿ ಮೋಟಾರ್ ಬೈಕ್, ಗ್ಯಾಸ್ ಸಿಲಿಂಡರ್​ ತೆಗೆದುಕೊಂಡು ಹೋಗುವ ಮೂಲಕ ಪ್ರತಿಭಟನಾಕಾರರು ವಿಭಿನ್ನವಾಗಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಪೆಟ್ರೋಲ್ ಹಾಕಿ ವಾಹನ ಚಲಾಯಿಸಲು ಸಾಧ್ಯವಿಲ್ಲ, ತಳ್ಳುಗಾಡಿಯ ಮೇಲೆ ದ್ವಿಚಕ್ರ ವಾಹನ ಇಟ್ಟು ತಳ್ಳುತ್ತಾ ಹೋಗುವ ಪರಿಸ್ಥಿತಿ ಇದೆ ಎನ್ನುವುದನ್ನು ಮಾರ್ಮಿಕವಾಗಿ ಹೇಳಿದರು.

ಓದಿ:ಯಲ್ಲಮ್ಮನ ಜಾತ್ರೆ: ಮಹಿಳೆಯರಿಂದ ಅರೆ ಬೆತ್ತಲೆ ಮೆರವಣಿಗೆ

ಪ್ರತಿಭಟನೆಗೆ ರಾಜ್ಯದ ಅತಿಥಿ ಉಪನ್ಯಾಸಕರು ಕೈಜೋಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಅಣಕು ಶವಯಾತ್ರೆ ನಡೆಸಿದರು. ಸಂಬಳ ಪಡೆಯದೇ, ಕೆಲಸವಿಲ್ಲದೇ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ನಮ್ಮ ಹೆಣದ ಯಾತ್ರೆಯನ್ನು ನಾವೇ ಮಾಡುವಂತಹ ಪರಿಸ್ಥಿತಿ ಇದೆ ಎಂಬುದನ್ನು ತೆರೆದಿಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ನಿತ್ಯಾನಂದ ಒಳಕಾಡು, ದೇಶದಲ್ಲಿ ಕೊರೊನಾ ಮಹಾಮಾರಿ ಬಂದು ಜನಸಾಮಾನ್ಯರಿಗೆ ಬಹಳ ಕಷ್ಟವಾಗಿದೆ. ದುರ್ಗಮ ಸಂದರ್ಭದಲ್ಲಿ ಸರ್ಕಾರ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮಾಡುವುದು, ಅಡುಗೆ ಅನಿಲದ ಬೆಲೆ ಏರಿಸಿರುವುದು ಖಂಡನೀಯ. ಕೂಡಲೇ ಬೆಲೆ ಇಳಿಸಬೇಕು. ಜನಸಾಮಾನ್ಯರಿಗೆ ಬದುಕುವ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.